ಮುಂಗಾರು ಮಳೆ ವೈಫಲ್ಯದಿಂದ, ರಾಜ್ಯದ ರೈತರಿಗೆ ಪರಿಹಾರ ನೀಡಲು 17 ಸಾವಿರ ಕೋಟಿ ರೂಪಾಯಿ ನೀಡುವಂತೆ ಕೇಂದ್ರಕ್ಕೆ ಮನವಿ…

ಕರ್ನಾಟಕ ರಾಜ್ಯದಲ್ಲಿ ಮುಂಗಾರು ಬೆಳೆಗಳನ್ನು ಬೆಳೆದು, ಮಳೆಬಾರದ ಕಾರಣದಿಂದ ರಾಜ್ಯದ ರೈತರು ಬರಗಾಲದಿಂದ ಕಂಗಾಲಾಗಿದ್ದಾರೆ. ಈ ಕುರಿತು ರೈತರಿಗೆ ಪರಿಹಾರ ನೀಡಲು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು, ಕೃಷಿ ಸಚಿವ ಚೆಲುವರಾಯಸ್ವಾಮಿ ಹಾಗೂ ಆರ್ ಡಿ ಪಿ ಆರ್ ಸಚಿವ ಪ್ರಿಯಾಂಕ ಖರ್ಗೆ ಅವರು ದೆಹಲಿಯಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಯವರಾದ ಮನೋಜ್ ಕುಮಾರ್ ಅಹುಜಾ ಮತ್ತು ಮತ್ತು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದ್ದಾರೆ.ಅವರಿಗೆ ಶೀಘ್ರದಲ್ಲೇ,17901 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಬೇಕೆಂದು ಮನವಿ ಸಲ್ಲಿಸಿದರು.

ಮನವಿ ಸಲ್ಲಿಸೀದ ನಂತರ ದೆಹಲಿಯ ಕರ್ನಾಟಕ ಭವನದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರವರು , ನಾವು ಎನ್ ‌ಡಿ ಆರ್ ಎಫ್ ನಿಯಮಗಳ ಪ್ರಕಾರ ಒಟ್ಟು 17,901,73 ಕೋಟಿ ರೂ. ಬರ ಪರಿಹಾರ ಕೇಳಿದ್ದೇವೆ, ತೇವವಾಗಿ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದೂ ಒತ್ತಾಯಿಸಿದ್ದೇವೆ, ಸೆಪ್ಟೆಂಬರ್ 22ರ ವೇಳೆಗೆ ರಾಜ್ಯ ಶೇ. 26 ಮಳೆ ಕೊರತೆ ದಾಖಲಿಸಿದೆ, ಇದರಿಂದಾಗಿ ಸುಮಾರು 45.55 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟವಾಗಿದೆ ಎಂದು ಹೇಳಿದರು.

ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರವು ವಿವಿಧ ಸಮೀಕ್ಷೆಗಳನ್ನು ಮಾಡಿ ರಾಜ್ಯದ 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಣೆ ಮಾಡಲಾಗಿದ್ದು, ಮುಂದಿನ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಮತ್ತಷ್ಟು ತಾಲೂಕುಗಳನ್ನು ಸೇರಿಸುವ ಸಾಧ್ಯತೆ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದರು ಮತ್ತು ಅಂದಾಜು 17,901 ಕೋಟಿ ರೂ. ಬರ ಪರಿಹಾರ ನಿಧಿಯಲ್ಲಿ, ಬರಗಾಲದಿಂದಾಗಿ ಕಳೆದ 90 ದಿನಗಳಿಂದ ಜೀವನೋಪಾಯಕ್ಕೆ ತೀವ್ರ ತೊಂದರೆ ಎದುರಿಸುತ್ತಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರ ಮೊದಲ ಬಾರಿಗೆ 12,577 ಕೋಟಿ ರೂ. ಪರಿಹಾರ ಕೇಳಿದೆ. ಈ ರೀತಿ ಇಷ್ಟು ದೊಡ್ಡ ಮೊತ್ತದ ಹಣವನ್ನು ನಾವು ಈ ಮೊದಲ ಬಾರಿಗೆ ಕೇಳುತ್ತಿದ್ದೇವೆ, ಈ ಮೊತ್ತವನ್ನು ಎನ್ ‌ಡಿ ಆರ್ ಎಫ್  ರಾಜ್ಯದ ರೈತರಿಗೆ ಅನುಕೂಲವಂತೆ ನೀಡಲು ಸಾಧ್ಯವಿದೆ ಎಂದು ಹೇಳಿದರು.

ಮುಂಗಾರು ಹಂಗಾಮಿನ ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟ ಪರಿಹಾರ ಎಂದು 4414.29 ಕೋಟಿ ರೂಪಾಯಿ, ಪಶು ಆಹಾರಕ್ಕಾಗಿ 355 ಕೋಟಿ ರೂಪಾಯಿ ಮತ್ತು ಬರ ಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು ಪೂರೈಸಲು 554 ಕೋಟಿ ರೂ. ನೆರವು ನೀಡಬೇಕೆಂದು ಕೋರಲಾಗಿದೆ.

ಮಾಧ್ಯಮಗಳ ( Media )ಜೊತೆಗೆ ಕಂದಾಯ  ಸಚಿವರಾದ ಕೃಷ್ಣ ಬೈರೇಗೌಡರು ರಾಜ್ಯದಲ್ಲಿ ಬೆಳೆ ಹಾನಿಯಿಂದ ಒಟ್ಟು 33,770.10 ಕೋಟಿ ರೂ. ನಷ್ಟ ವಾಗಿದೆ ಎಂದು ಅಂದಾಜಿಸಲಾಗಿದ್ದು, ರಾಷ್ಟ್ರೀಯ ವಿಪತ್ತು ಪರಿಹಾರದಡಿ 17,901,73 ಕೋಟಿ ರೂ. ನೆರವು ಕೇಳಲಾಗಿದೆ. ಪರಿಹಾರ ನಿಧಿ ಮಂಜೂರು ಮಾಡುವಾಗ ರಾಜ್ಯದ ಜನಸಂಖ್ಯೆಯ ಶೇ.70 ಇರುವ ಸಣ್ಣ ಮತ್ತು ಅತಿ ಸಣ್ಣ ರೈತರ ಇತ್ತೀಚಿನ ಸಂಖ್ಯೆಯನ್ನು ಪರಿಗಣಿಸಲು ಮನವಿ ಮಾಡಿದ್ದೇವೆ.

 ಈ ಒಂದು ಸರ್ಕಾರದ ಮುನ್ನಡೆಯು ಬರಗಾಲದಿಂದ ಕಂಗಾಲಾಗಿದ್ದ ರಾಜ್ಯದ ಎಲ್ಲಾ ರೈತರಿಗೆ ಅನುಕೂಲವಾಗಲು ತುಂಬಾ ಸಹಾಯಕವಾಗಿದೆ. ನಾವು ದಿನನಿತ್ಯ ರೈತರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು  ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

 

Leave a Comment