ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರಂಭವಾಗಿರುವ ಗೃಹಲಕ್ಷ್ಮಿ ಕ್ಯಾಂಪ್.

ನಮಸ್ಕಾರ ಆತ್ಮೀಯ ಸ್ನೇಹಿತರೆ  ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂರು ದಿನಗಳ ಕಾಲ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಕ್ಯಾಂಪ್ ಆರಂಭವಾಗಲಿದ್ದು ಇದೇ ಡಿಸೆಂಬರ್ 27ರಿಂದ 29 ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರ ಆಯೋಜಿಸಲಾಗಿದೆ ಈ ಶಿಬಿರದಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಜಮಾ ಮಾಡುವ ನಿಟ್ಟಿನಲ್ಲಿ  ಈ ಶಿಬಿರವನ್ನು ಆಯೋಜಿಸಲಾಗಿದೆ. ಈ ಕ್ಯಾಂಪ್ನಲ್ಲಿ ನಿಮ್ಮ ಗ್ರಹಲಕ್ಷ್ಮಿ ಯೋಜನೆಗೆ ಹಣ ಜಮಾ ಆಗುವ ಯಾವುದೇ ತೊಂದರೆಗಳಿದ್ದರೂ ಆಧಾರ್ ಜೋಡಣೆ ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ತೊಂದರೆ ಹಾಗೂ ಈ ಕೆ ವೈ ಸಿ ಅಪ್ಡೇಟ್ ಮತ್ತು ಹಲವು ಸಮಸ್ಯೆಗಳು ಸೇರಿದಂತೆ ಈ ಶಿಬಿರದಲ್ಲಿ ಬಗೆಹರಿಸಲಾಗುವುದು.

ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿ ಹಾರ ಒದಗಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾ ಯತಿ ಕಚೇರಿಗಳಲ್ಲಿ ಡಿ.27ರಿಂದ 29ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ತೊಂದರೆ ನಿವಾರಿಸಿಕೊಂಡು ಗೃಹಲಕ್ಷ್ಮೀ ಲಾಭ ಪಡೆಯಿರಿ.

ಈ ಬಗ್ಗೆ ಮಾತನಾಡಿರುವ ಅವರು, ಆಧಾರ್ ಜೋಡಣೆ, ಬ್ಯಾಂಕ್‌ಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ ಅಪ್ ಡೇಟ್, ಹೊಸ ಬ್ಯಾಂಕ್ ಖಾತೆ ಆರಂಭ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ ಗೃಹಲಕ್ಷ್ಮಿ ಯೋಜನೆಯಲ್ಲಿ ರಾಜ್ಯದ ಹಲವು ಮಹಿಳೆಯರು ತೊಂದರೆ ಎದುರಿಸುತ್ತಿದ್ದಾರೆ. ಈ ತೊಂದರೆಗಳನ್ನು ಪರಿಹರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಜಮಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಈ ಶಿಬಿರ ಸಜ್ಜುಗೊಳಿಸಲಾಗಿದೆ ಎಂದು

ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುವಲ್ಲಿ ತೊಂದರೆ ಎದುರಿಸುತ್ತಿರುವ ಫಲಾನುಭವಿಗಳು ತಮ್ಮ ಹಾಗೂ ಪತಿಯ ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಪಾಸ್‌ಬುಕ್ ದಾಖಲೆಗಳೊಂದಿಗೆ ಶಿಬಿರಕ್ಕೆ ಬರಬೇಕು. ಕ್ಷೇತ್ರ ಮಟ್ಟದ ಸಿಬ್ಬಂದಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ನೀಡಿ ಅವರನ್ನು ಶಿಬಿರಗಳಿಗೆ ಕರೆ ತರುವ ವ್ಯವಸ್ಥೆ ಮಾಡಲಾಗಿದೆ.

 3 ದಿನ ಪಂಚಾಯಿತಿ ಮಟ್ಟದಲ್ಲಿ ಆಯೋಜನೆ.

27ಕ್ಕೆ ಗೃಹಲಕ್ಷ್ಮಿಗಾಗಿ ಕ್ಯಾಂಪ್  ಗೃಹಲಕ್ಷ್ಮಿ ಯೋಜನೆ ಸಂಬಂಧ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟ ದಲ್ಲಿ ಡಿ. 27ರಿಂದ 29ರವರೆಗೆ ಕ್ಯಾಂಪ್ ಆಯೋಜಿಸಲು ಸರಕಾರ ತೀರ್ಮಾನಿಸಿದೆ. ಯೋಜನೆಯಡಿ 3 ಲಕ್ಷಕ್ಕೂ ಹೆಚ್ಚು ಫಲಾನು ಭವಿಗಳ ಬ್ಯಾಂಕ್‌ ಖಾತೆ, ಆಧಾರ್ ಜೋಡಣೆ ಗೊಂದಲ ಇದ್ದು, ಇವನ್ನು ಬಗೆಹರಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ತಿಳಿಸಿದ್ದಾರೆ

 ಗೃಹಲಕ್ಷ್ಮಿ ಯೋಜನೆ ಅರ್ಜಿದಾರರ ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಡಿಸೆಂಬರ್ 27 ರಿಂದ 29ರವರೆಗೆ ವಿಶೇಷ ಶಿಬಿರ ಆಯೋಜಿಸಲಾಗಿದ್ದು, ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ತೊಂದರೆ ಅನುಭವಿಸುತ್ತಿರುವ ಮಹಿಳೆಯರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸುತ್ತೇನೆ.

👉How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

https://krishisuddi.com/how-to-check-all-lands-are-connected-to-fid-number/

👉ಈ ದಿನಾಂಕದೊಳಗೆ FID ಮಾಡಿಸದಿದ್ದರೆ ನಿಮಗೆ ಬೆಳೆ ಪರಿಹಾರದ ಹಣ ಸಿಗುವುದಿಲ್ಲ

https://krishisuddi.com/last-date-for-fid/

👉ಬೆಳೆ ವಿಮೆ ಜಮೆ ಆಗದಿರುವವರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ  ತಪ್ಪನ್ನು ಸರಿಪಡಿಸಿಕೊಳ್ಳಿ ಹಾಗೂ ನಿಮ್ಮ ಖಾತೆಗೆ ಬೆಳವಿಮೆಯನ್ನು ಪಡೆಯಿರಿ

https://krishisuddi.com/crop-insurance-failed-list-2/

👉Annabhagya 4th installment released

https://krishisuddi.com/annabhagya-4th-installment-released/

👉ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ / ಸಹಾಯಧನ ಒದಗಿಸಲು ಆನ್ ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

https://krishisuddi.com/ganga-kalyan-yojana-2023-loan-scheme/

👉 ರೈತರಿಗೆ ಶೇ. 90ರಷ್ಟು ಸಹಾಯಧನದಲ್ಲಿ ಹನಿ ಹಾಗೂ ತುಂತುರು ನೀರಾವರಿ ಘಟಕ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

https://krishisuddi.com/90-percent-subsidy-to-farmers-for-drip-irrigation/

👉 ಕೇಂದ್ರ ಸರಕಾರವು ಮುಂದಿನ ವರ್ಷದ ಮಾರ್ಚ್‌ವರೆಗೆ ಈರುಳ್ಳಿ ರಫಿಗೆ ನಿಷೇಧ!

https://krishisuddi.com/ban-on-onion-rafi/

1 thought on “ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರಂಭವಾಗಿರುವ ಗೃಹಲಕ್ಷ್ಮಿ ಕ್ಯಾಂಪ್.”

Leave a Comment