court jobs

ಪ್ರಮುಖ ಸೂಚನೆಗಳು:

ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಯಾವುದೇ ವರ್ಗಗಳ ಮಹಿಳಾ ಅಭ್ಯರ್ಥಿಗಳು, ಮಾಜಿ ಸೈನಿಕ ಅಭ್ಯರ್ಥಿಗಳು, ಕನ್ನಡ ಮಾಧ್ಯಮ ಅಭ್ಯರ್ಥಿಗಳು, ಯೋಜನಾ ನಿರಾಶ್ರಿತ ಅಭ್ಯರ್ಥಿಗಳು ಹಾಗೂ ಗ್ರಾಮೀಣ ಅಭ್ಯರ್ಥಿಗಳ ಮೀಸಲಾತಿಗಳಿಗೆ ಅರ್ಹರು ಲಭ್ಯವಿರದೇ ಇದ್ದ ಪಕ್ಷದಲ್ಲಿ, ಆ ಹುದ್ದೆಗಳನ್ನು ಆಯಾ ಪ್ರವರ್ಗಗಳ, ಇತರ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುವುದು. ಆಯಾ ಪ್ರವರ್ಗಗಳ ಇತರ ಅಭ್ಯರ್ಥಿಗಳೂ ಸಹ ಲಭ್ಯವಾಗದಿದ್ದಲ್ಲಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಆಯಾ ಪ್ರವರ್ಗಗಳ ಅರ್ಹ ಅಭ್ಯರ್ಥಿಗಳ ಲಭ್ಯತೆಯ ಕೊರತೆಯಿಂದಾಗಿ ಭರ್ತಿ ಮಾಡಲಾಗದ ರಿಕ್ತ ಸ್ಥಾನಗಳನ್ನು ಬ್ಯಾಕ್ ಲಾಗ್ ಎಂದು ಪರಿಗಣಿಸಿ ಮುಂದಕ್ಕೆ ಕೊಂಡೊಯ್ಯಲಾಗುವುದು.

ಒಟ್ಟು ಹುದ್ದೆಗಳು:

45

ವಯೋಮಿತಿ :

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ಪೂರೈಸಿರತಕ್ಕದ್ದು.

ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35 ವರ್ಷ, 2ಎ/2ಬಿ/ 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಪವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯೋಮಿತಿ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ :

ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳನ್ನು ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು, ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನೊಳಗೊಂಡಿರುತ್ತದೆ.

ವಿದ್ಯಾರ್ಹತೆ:

ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಶುಲ್ಕವನ ಸ್ವೀಕರಿಸಲು ನಿಗದಿಪಡಿಸಿದ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ 17,000 800 28,950 ರೂ. ತನಕ ವೇತನ ಶ್ರೇಣಿ ನಿಗದಿ ಮಾಡಲಾಗಿದೆ.

ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿಯಿರುವ ಸೇವಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಆನೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು

ಅರ್ಜಿ ಶುಲ್ಕ :

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ. ಪ್ರವರ್ಗ 2ಎ/ 2ಬಿ/3ಎ/3ಬಿ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿಸಬೇಕು

 

By Raju

One thought on “ಜಿಲ್ಲಾ ನ್ಯಾಯಾಂಗ ಘಟಕದಲ್ಲಿ 45 ಹುದ್ದೆಗಳಿಗಾಗಿ ಅರ್ಜಿ ಆಹ್ವಾನ”

Leave a Reply

Your email address will not be published. Required fields are marked *