ರೈತರಿಗೆ 7 ತಾಸು ವಿದ್ಯುತ್ ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿಕೆ 

ರಾಜ್ಯಾದ್ಯಂತ ರೈತರ ನೀರಾವರಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ತಾಸುಗಳ ವಿದ್ಯುತ್‌ ಒದಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತಮ್ಮಗೃಹ ಕಚೇರಿ ಕೃಷ್ಣದಲ್ಲಿಂದು ನಡೆದ ಇಂಧನ ಇಲಾಖೆಯ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರೈತರ ನೀರಾವರಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ತಾಸು ವಿದ್ಯುತ್‌ ಒದಗಿಸುವ ತೀರ್ಮಾನಮಾಡಲಾಗಿದ್ದು, ಇಂದಿನಿಂದಲೇ 7 ತಾಸು ವಿದ್ಯುತ್ ನೀಡಲಾಗುವುದು ಎಂದರು.

ನಿರಂತರ 7 ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು ಪ್ರತಿದಿನ 14 ಮಿಲಿಯನ್ ಯೂನಿಟ್‌ಗಳ ಅಗತ್ಯವಿದ್ದು, ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.

ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ 7 ತಾಸು ವಿದ್ಯುತ್‌ ನೀಡಲು ಸಭೆನಿರ್ಧರಿಸಿದ್ದು, ಅದರಂತೆ ಅನುದಾನದ ಉಳಿತಾಯಮರು ಹಂಚಿಕೆಯ ಮೂಲಕ 1500 ಕೋಟಿ ರೂ. ವೆಚ್ಚವನ್ನು ವರ್ಷ ಭರಿಸಲಾಗುತ್ತದೆ ಎಂದರು.

ಸೌರ ವಿದ್ಯುತ್ ಮುಂದಿನ ವರ್ಷದಲ್ಲಿ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯನ್ನು ಸೌರ ವಿದ್ಯುತ್ ಮೂಲಕ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಟೆ- ೦ಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ

ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ಒದಗಿಸಲು ಇದರಿಂದ ಅನುಕೂಲವಾಗಲಿದೆ ಎಂದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವಿದ್ಯುತ್ ಬೇಡಿಕೆ ಸರಾಸರಿ ಶೇ.43ರಷ್ಟು ಹೆಚ್ಚಾಗಿದೆ. ಕೃಷಿಯಲ್ಲಿ ವಿದ್ಯುತ್ ಬಳಕೆ ಶೇ. 50 ರಿಂದ ಶೇ. 119 ರಷ್ಟು ಹೆಚ್ಚಳವಾಗಿದೆ

 ಇತರ ವಿಭಾಗಗಳಲ್ಲೂ ಶೇ. 9 ರಿಂದ 14 ರಷ್ಟು ವಿದ್ಯುತ್ ಬಳಕೆ ಹೆಚ್ಚಾಗಿದೆ. ಮಳೆ ಕೊರತೆ, ಕೋವಿಡ್ ನಂತರದ ಆರ್ಥಿಕ ಪುನಶ್ಚತನ ಇದಕ್ಕೆ ಕಾರಣವಾಗಿದೆ ಎಂದು ಸಭೆಯಲ್ಲಿ ಚರ್ಚಿಸಲಾಗಿದ್ದು, ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ, ಉಷ್ಣ ವಿದ್ಯುತ್ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ ಎಂದು ಹೇಳಿದರು.

ಸೆಕ್ಷನ್ 11 ರಡಿ ರಾಜ್ಯದಲ್ಲಿ ಉತ್ಪಾದನೆಯಾಗುವ ವಿದ್ಯುತ್‌ನ್ನು ರಾಜ್ಯಕ್ಕೆ ನೀಡುವಂತೆ ಆದೇಶ ಹೊರಡಿಸಿ, ಅದರಂತೆ ವಿದ್ಯುತ್ ಪಡೆಯಲಾಗುತ್ತಿದೆ. ಈ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದರು.

ಈ ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವಗುಪ್ತ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

 

 

Leave a Comment