ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ನೇಮಕಾತಿ: ಮೀಸಲಾತಿಯಲ್ಲಿ ತಿದ್ದುಪಡಿ

ಕಲಬುರಗಿ-ಚಿತ್ತಾಪೂರ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 12 ಅಂಗನವಾಡಿ ಕಾರ್ಯಕರ್ತೆ ಮತ್ತು 26 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಈಗಾಗಲೇ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ ತಾಂತ್ರಿಕ ಲೋಷದಿಂದಾಗಿ ಈ ಕೆಳಕಂಡಂತೆ ಮೀಸಲಾತಿಯನ್ನು ತಿದ್ದುಪಡಿ ಮಾಡಲಾಗಿದೆ ಎಂದು ಚಿತ್ತಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ ಕೇಂದ್ರದ ಹೆಸರು ಹಾಗೂ ತಿದ್ದುಪಡಿ ಮಾಡಲಾದ ಮೀಸಲಾತಿ ವಿವರ ಇಂತಿದೆ. ಚಿತ್ತಾಪೂರ ಪುರಸಭೆ (ವಾರ್ಡ್ ೯೯ ನಂ. 04) ಬಿಲಾಲ ಕಾಲೊನಿ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್.ಸಿ. ಮೀಸಲಾತಿ ಬದಲಾಗಿ ಇತರೆ ಮೀಸಲಾತಿ ಎಂದು ಓದಿಕೊಳ್ಳಬೇಕು. ಅದೇ ರೀತಿ ಚಿತ್ತಾಪೂರ ಪುರಸಭೆ (ವಾರ್ಡ್ ನಂ. 04) ಬಿಲಾಲ ಕಾಲೊನಿ ಅಂಗನವಾಡಿ ಕೇಂದ್ರದ ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್.ಸಿ. ಮೀಸಲಾತಿ ಬದಲಾಗಿ ಇತರೆ ಮೀಸಲಾತಿ ಎಂದು ಓದಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು 2023ರ ಏಪ್ರಿಲ್ 24 ಕೊನೆಯ ದಿನವಾಗಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಚಿತ್ತಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Leave a Comment