annabhagya

Annabhagya 4th installment released: ನನ್ನ ಖಾತೆಗೆ ಅನ್ನಭಾಗ್ಯ ಯೋಜನೆಯ ನಾಲ್ಕನೇ  ಕಂತಿನ ಹಣ ಬಿಡುಗಡೆ. ನಿಮ್ಮ ಖಾತೆಗೆ ಜಮಾ ಆಗಿದಿಯೋ ಇಲ್ಲವೋ ಎಂದು ಹೀಗೆ ತಿಳಿದುಕೊಳ್ಳಿ.

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತಹ ಅನ್ನಭಾಗ್ಯ ಯೋಜನೆ ಅಡಿಯಲ್ಲಿ, ಒಬ್ಬ ಸದಸ್ಯರಿಗೆ 170ರೂ. ನಂತೆ ಪ್ರತಿ ತಿಂಗಳು ಹಣ ವರ್ಗಾವಣೆ ಮಾಡುತ್ತಿದ್ದು, ಈಗಾಗಲೇ   ನಾಲ್ಕು ಬಾರಿ ಹಣ ವರ್ಗಾವಣೆಯಾಗಿದೆ.  ನಾಲ್ಕನೇ  ತಿಂಗಳ ಹಣ ಜಮವಾಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನು ಹೇಗೆ ಪರಿಶೀಲಿಸಬೇಕೆಂಬ ಮಾಹಿತಿ ತಿಳಿದುಕೊಳ್ಳಲು ಕೆಳಗಿನ ಲೇಖನವನ್ನು ಸಂಪೂರ್ಣವಾಗಿ ಓದಿ.

Annabhagya Status Check

ಅನ್ನಭಾಗ್ಯ ಮೂರನೇ ಕಂತಿನ ಹಣವನ್ನು ಪರಿಶೀಲಿಸಲು ಮೊದಲು ಕರ್ನಾಟಕ ಸರ್ಕಾರದ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. ಅಧಿಕೃತ ಜಾಲತಾಣದ ಲಿಂಕ್

https://ahara.kar.nic.in/Home/EServices

ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯ ಪ್ರಕಾರ ಕುಟುಂಬದಲ್ಲಿ ಎಷ್ಟು ಜನ ಇರುತ್ತಾರೆ ಅದರ ಮೇಲೆ ನಿಮಗೆ ಹಣ ಬರುತ್ತದೆ. ಈ ಹಣವು ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗುತ್ತದೆ.

ಒಂದು ವೇಳೆ ನಿಮ್ಮ ಕುಟುಂಬದ ಸದಸ್ಯರು ಒಬ್ಬರಿದ್ದಲ್ಲಿ 170ರೂ. ನಿಮ್ಮ ಖಾತೆಗೆ ಜಮಾ ಆಗುತ್ತದೆ. ಹೀಗೆ ಪ್ರತಿಯೊಬ್ಬರಿಗೆ 170 ರೂಪಾಯಿಯಂತೆ ಹಣ ವರ್ಗಾವಣೆಯಾಗುವುದು.

  • ಕುಟುಂಬದ ಸದಸ್ಯರು ಇಬ್ಬರಿದ್ದರೆ – 340ರೂ.
  • ಕುಟುಂಬದ ಸದಸ್ಯರು ಮೂವರಿದ್ದರೆ – 510ರೂ.
  • ಕುಟುಂಬದ ಸದಸ್ಯರು ನಾಲ್ಕು ಜನರಿದ್ದಾರೆ – 680ರೂ.

ಈ ರೀತಿಯಲ್ಲಿ ಹಣ ವರ್ಗಣೆಯಾಗುತ್ತದೆ.

ಕರ್ನಾಟಕ ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯ BPL ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರಿಗೆ 10 ಕೆ.ಜಿಯಂತೆ ಅಕ್ಕಿ ಕೊಡುವ ಯೋಜನೆ ಮಾಡಲಾಗಿತ್ತು. ಆದರೆ 5KG ಅಕ್ಕಿ ಕೊಟ್ಟು ಉಳಿದ 5ಕೆಜಿ ಬದಲಾಗಿ ಒಬ್ಬರಿಗೆ 170 ರೂ. ನಂತೆ ಹಣ ನೀಡುವ ಯೋಜನೆ ಇದಾಗಿದ್ದು, ಕಳೆದ ತಿಂಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಹಣ ಜಮವಾಗಿದೆ. ಈ ತಿಂಗಳ ಹಣ ವರ್ಗಾವಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಯೋಜನೆಯ ವಿವರ!

ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯಾದಂತಹ ಅನ್ನ ಭಾಗ್ಯ ಯೋಜನೆಯು BPL ಕಾರ್ಡ ಮತ್ತು ಅಂತ್ಯೋದಯ ಕಾರ್ಡ ಹೊಂದಿರುವವರಿಗೆ ಕುಟುಂಬದ ಪ್ರತಿಯೊಬ್ಬರಿಗೆ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆ.ಜಿ ಬದಲಾಗಿ ಪ್ರತಿಯೊಬ್ಬರಿಗೆ 170 ರೂಪಾಯಿಯಂತೆ ಹಣ ವರ್ಗಾಯಿಸುವುದಾಗಿ ಯೋಜನೆ ರೂಪಿಸಲಾಗಿದೆ.

ಈ ಹಣ ವರ್ಗಾವಣೆಯು ಡಿಬೀಟಿ ಮುಖಾಂತರ ಕಳೆದ ತಿಂಗಳಿಂದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗುತ್ತಿದೆ. ಈ  ತಿಂಗಳಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಈ ಹಣದ ಸ್ಟೇಟಸ್ ಅನ್ನು ಹೇಗೆ ಚೆಕ್ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.

DBT STATUS ಹೇಗೆ check ಮಾಡಬೇಕು?

ಈ ತಿಂಗಳಿನ ಈ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದೆಯೋ ಇಲ್ಲವೋ ಎಂದು ಪರಿಶೀಲಸಲು ಈ ಕೆಳಗಿನ ಮಾಹಿತಿಯಂತೆ ಮಾಡಿ ನಿಮ್ಮ ಸ್ಟೇಟಸ್ ಅನ್ನು ಪರಿಶೀಲಿಸಿಕೊಳ್ಳಿ.

ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. ahara.kar.nic.in

ನಂತರ ಜಿಲ್ಲೆಗಳ ಹೆಸರನ್ನು ತೋರಿಸುತ್ತದೆ. ಅದರಲ್ಲಿ ನಿಮ್ಮ ಜಿಲ್ಲೆಯ ಹೆಸರಿನ ಲಿಂಕನ್ನು ಕ್ಲಿಕ್ ಮಾಡಿ.

ನಂತರ STATUS OF DBT ಎಂಬ ಸಾಲು ಪರದೆ ಮೇಲೆ ಬರುತ್ತದೆ ಇದರ ಮೇಲೆ ಕ್ಲಿಕ್ ಮಾಡಿ

STATUS OF DBT ಪೇಜ್ ಓಪನ್ ಆದ ನಂತರ ಅಲ್ಲಿ ಈ ವರ್ಷ ಮತ್ತು ತಿಂಗಳನ್ನು ಆಯ್ಕೆ ಮಾಡಲು ಕೇಳುತ್ತದೆ. ತಿಂಗಳನ್ನು ಆಯ್ಕೆ ಮಾಡಿದ ನಂತರ ಅಲ್ಲಿ ನಿಮ್ಮ ರೇಷನ್ ಕಾರ್ಡ ನಂಬರ್ ಅಥವಾ RC number ಎಂಟರ್ ಮಾಡಿ ನಂತರ GO ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.

ನಂತರ ನೀವು ನಿಮ್ಮ ಹಣ ವರ್ಗಾವಣೆಯ ಸ್ಥಿತಿಯನ್ನು  ಪರಿಶೀಲಿಸಿ.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

By Raju