ಬೆಳೆ ಪ್ರಶಸ್ತಿ ಕಾರ್ಯಕ್ರಮದಡಿ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

ಗದಗ: ಪ್ರಸಕ್ತ ಸಾಲಿನಲ್ಲಿ ಬೆಳೆ ಪ್ರಶಸ್ತಿ ಕಾರ್ಯಕ್ರಮದಡಿ ಆಸಕ್ತ ರೈತ, ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮುಂಗಾರು ಹಂಗಾಮಿನ ಬೆಳೆಗಳಾದ ಮುಸುಕಿನ ಜೋಳ ಬೆಳೆಗೆ ಸ್ಪರ್ಧಿಸಲು ಕೊನೆ ದಿನ ಆ.31 ಆಗಿರುತ್ತದೆ. ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಪಡೆಯಬಹುದು ಎಂದು ಕೃಷಿ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್‌. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Leave a Comment