೬ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ

ಬಳ್ಳಾರಿ ಕಲ್ಯಾಣ ಇಲಾಖೆಯಿಂದ ೨೦೨೩- ೨೪ ನೇ ಸಾಲಿಗೆ ೫ನೇ ತರಗತಿಯಲ್ಲಿ ಶೇ.೬೦ ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ೬ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಮೇ.೨೫ ರೊಳಗೆ ಸಲ್ಲಿಸಬೇಕು. ಡಯಟ್ ಮೂಲಕ ಪ್ರವೇಶ ಪರೀಕ್ಷೆ ಜೂನ್ ೦೧ ರಂದು ನಡೆಯುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.೦೮೩೯೨- ೨೬೭೯೩೨ ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ – ಉಪ ನಿರ್ದೇಶಕ ಸತೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Comment