applications

ಧಾರವಾಡ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುವಲ್ ಆರ್ಟ್ಸ್ (ಬಿ.ಎ.ಎ) ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ.ಪದವಿ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸದರಿ ಪದವಿಯಲ್ಲಿ ೩ ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ  https://uucms.karnataka. gov.in https://www.cavamysore.karnataka.gov. in ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಜೂನ್ ೦೯ ಕೊನೆಯ ದಿನ ಹಾಗೂ ಪ್ರವೇಶಾತಿ ಅರ್ಹತಾ ಪರೀಕ್ಷೆ ಜೂನ್ ೧೩ ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ:

ಕಾರ್ಯಾಲಯದ ಸಹಾಯವಾಣಿ ೦೮೨೧-೨೪೩೮೯೩೧ ಸಂಪರ್ಕಿಸಬಹುದು ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By Raju

Leave a Reply

Your email address will not be published. Required fields are marked *