ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗಾಗಿ ಅಜಿ ಆಹ್ವಾನ

ಬಳ್ಳಾರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ನೀಡಲು ಉದ್ದೇಶಿಸಿದ್ದು, ಆಸಕ್ತರು ಮೇ ೩೦ ರೊಳಗಾಗಿ ಬೆಳಗ್ಗೆ ೧೦ ರಿಂದ ಸಂಜೆ ೪ ರವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.೦೮೨೧-೨೫೧೫೯೪೪ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಎಲ್.ಎನ್.ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment