BHARAT ATTA: ಕೇವಲ 27.5 ರೂಪಾಯಿಗೆ ಒಂದು ಕೆಜಿ ಗೋಧಿ ಹಿಟ್ಟು :ಎಲ್ಲಿ ಸಿಗುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ, ಕೇಂದ್ರ ಸರ್ಕಾರದ ವತಿಯಿಂದ ಕೇವಲ 27.5 ರೂಪಾಯಿಗೆ ಒಂದು ಕೆಜಿ ಗೋಧಿ ಹಿಟ್ಟನ್ನು ನೀಡುತ್ತಿದ್ದು ಬನ್ನಿ ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.

ದೀಪಾವಳಿ ಹಬ್ಬಕ್ಕೂ ಮುನ್ನ, ಗ್ರಾಹಕರಿಗೆ ಕಡಿಮೆ ಬೆಲೆಗೆ ಗೋಧಿ ಹಿಟ್ಟು ಲಭ್ಯವಾಗುವಂತೆ ಮಾಡಲು ದೇಶಾದ್ಯಂತ ‘ಭಾರತ್ ಅಟಾ’ ಬ್ರಾಂಡ್‌ನಲ್ಲಿ ಕೆಜಿಗೆ ರೂ 27.50 ರ ಸಬ್ಸಿಡಿ ದರದಲ್ಲಿ ಗೋಧಿ ಹಿಟ್ಟಿನ ಮಾರಾಟವನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ.

BHARAT ATTA‘ ವನ್ನು ಸಹಕಾರಿ ಸಂಸ್ಥೆಗಳಾದ ಎನ್‌ಎಎಫ್‌ಇಡಿ, ಎನ್‌ಸಿಸಿಎಫ್‌ ಮತ್ತು ಕೇಂದ್ರೀಯ ಭಂಡಾರ ಮೂಲಕ 800 ಸಂಚಾರಿ ವಾಹನಗಳು ಮತ್ತು 2000 ಕ್ಕೂ ಹೆಚ್ಚು ಸರ್ಕಾರಿ ಮಳಿಗೆಗಳ ಮೂಲಕ ದೇಶಾದ್ಯಂತ ಮಾರಾಟ ಮಾಡಲಾಗುವುದು, ಸಬ್ಸಿಡಿ ದರವು ಗುಣಮಟ್ಟ ಮತ್ತು ಸ್ಥಳದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಮಾರುಕಟ್ಟೆ ದರ 36-70  ರೂ. ಗಳಿಗಿಂತಲೂ ಕಡಿಮೆಯಾಗಿರುತ್ತದೆ.

ಫೆಬ್ರವರಿಯಲ್ಲಿ ಬೆಲೆ ಸ್ಥಿರೀಕರಣ ನಿಧಿ ಯೋಜನೆಯ ಭಾಗವಾಗಿ ಕೆಲವು ಮಳಿಗೆಗಳಲ್ಲಿ ಈ ಸಹಕಾರಿ ಒಕ್ಕೂಟಗಳ ಮೂಲಕ ಪ್ರತಿ ಕೆಜಿಗೆ 29.5 ರೂ.ಗೆ 18,000 ಟನ್ ‘BHARAT ATTA’ ದ ಪ್ರಾಯೋಗಿಕ ಮಾರಾಟವನ್ನು ನಡೆಸಿತು.

ನವದೆಹಲಿಯ ಕರ್ತವ್ಯ ಪಥದಲ್ಲಿ ‘BHARAT ATTA‘ ದ 100 ಸಂಚಾರಿ ವಾಹನಗಳಿಗೆ ಚಾಲನೆ ನೀಡಿದ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್, ಪ್ರಾಯೋಗಿಕ ಪರೀಕ್ಷೆ ನಡೆಸಿ ಯಶಸ್ವಿಯಾಗಿದ್ದೇವೆ, ನಾವು ದೇಶದೆಲ್ಲೆಡೆ ಕೆಜಿಗೆ 27.50 ರೂ. ದರದಲ್ಲಿ ಗೋಧಿ ಹಿಟ್ಟು ದೊರೆಯಲಿದೆ ಎಂದು ತಿಳಿಸಿದರು.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

Leave a Comment