DBT

 ಸರ್ಕಾರದಿಂದ ರೈತರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಿಗುವ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಬೇಕಾದ DBT ( Direct benefit transfer ) – ನೇರ ನಗದು ವರ್ಗಾವಣೆ.

ಹಲವು ಯೋಜನೆಗಳಡಿ ಫಲಾನುಭವಿಗಳಿಗೆ ತಲುಪಬೇಕಾದ ಆರ್ಥಿಕ ಸಹಾಯ ನೇರವಾಗಿ ಅವರ ಖಾತೆಗೆ ತಲುಪುವಂತೆ ಮಾಡುವ ಒಂದು ಮಾರ್ಗವ ‘ನೇರ ನಗದು ವರ್ಗಾವಣೆ’ (direct benefit transfer- DBT). ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಕೊನೆಯವರೆಗೂ ಓದಿ..

What is DBT? DBT ಎಂದರೇನು?

Direct Benefit Transfer – ” ನೇರ ನಗದು ವರ್ಗಾವಣೆ :

ಹಲವು ಯೋಜನೆಗಳಡಿ ಫಲಾನುಭವಿಗಳಿಗೆ ತಲುಪಬೇಕಾದ ಆರ್ಥಿಕ ಸಹಾಯ ನೇರವಾಗಿ ಅವರ ಖಾತೆಗೆ ತಲುಪುವಂತೆ ಮಾಡಲು ‘ನೇರ ನಗದು ವರ್ಗಾವಣೆ’ (direct benefit transfer- DBT). ಈ ಒಂದು ಯೋಜನೆಯ ಮೂಲಕ ರೈತರು ವಿದ್ಯಾರ್ಥಿಗಳು ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳ ಹಣದ ಮಾಹಿತಿಯನ್ನು ತಿಳಿದುಕೊಳ್ಳಬಹುದು..

ಕೇವಲ ನಿಮ್ಮ ಆಧಾರ್ ನಂಬರ್ ನಿಂದ, ಯಾವ ಯಾವ ಯೋಜನೆಯಿಂದ ಎಷ್ಟು ಹಣ ನಿಮ್ಮ ಖಾತೆಗೆ ಜಮವಾಗಿದೆ ಎಂದು ಹೀಗೆ ತಿಳಿದುಕೊಳ್ಳಬಹುದು | How to check DBT payment by adhar card :

Step 1

: ನಿಮ್ಮ ಮೊಬೈಲ್ ನಲ್ಲಿರುವ ಗೂಗಲ್ ಪ್ಲೇ ಸ್ಟೋರ್ ಗೆ ಭೇಟಿ ನೀಡಿ DBT ಎಂದು ಸರ್ಚ್ ಮಾಡಿ ಡಿ ಬಿ ಟಿ ಆಪನ್ನು ಡೌನ್ಲೋಡ್ ಮಾಡಿಕೊಳ್ಳಿ. ಈ ಆಪನ್ನು ಡೌನ್ಲೋಡ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್ ಇಲ್ಲಿದೆ

DBT App download direct link :

https://play.google.com/store/apps/details?id=com.dbtkarnataka

Step 2.

ನಂತರ ನಿಮ್ಮ ಆಧಾರ್ ನುಂಬರ್ ಎಂಟ್ರಿ ಮಾಡಿ, Get OTP ಎಂಬುದರ ಮೇಲೆ ಒತ್ತಿ. ನಿಮ್ಮ ಆಧಾರ್ ಕಾರ್ಡ್ ಲಿಂಕ್ ಇರುವ ಮೊಬೈಲ್ ನಂಬರ್ ಗೆ ಆರು ಸಂಖ್ಯೆಯ ಒಂದು ಓಟಿಪಿ ಬರುತ್ತದೆ. ಈ ಓ ಟಿ ಪಿ ಯನ್ನು ನಮೂದಿಸಿ Verify OTP ಎಂಬ ಬಟನ್ ಮೇಲೆ ಒತ್ತಿ.

Step 3 :

OTP verify ಆದ ನಂತರ, ನಿಮಗೆ ನೆನಪಿಟ್ಟುಕೊಳ್ಳಲು ಸುಲಭವಾದ 4  ಸಂಖ್ಯೆಯ mPin create ಮಾಡಿ.

Step 4.

ನಂತರ ನಿಮಗೆ ಅಲ್ಲಿ ಹಲವಾರು ಆಯ್ಕೆಗಳು ಕಾಣುತ್ತವೆ, ಅಲ್ಲಿ ನೀವು Payment Status ಎಂಬುದರ ಮೇಲೆ ಒತ್ತಿ ಸರ್ಕಾರದಿಂದ ನಿಮಗೆ ವಿವಿಧ ಯೋಜನೆಗಳಡಿ, ಜಮವಾದ ಪ್ರತಿಯೊಂದು ಮಾಹಿತಿಯನ್ನು ಪಡೆದುಕೊಳ್ಳಿ.

ನಾವು ದಿನನಿತ್ಯ ರೈತರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು  ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

 

 

By Raju

Leave a Reply

Your email address will not be published. Required fields are marked *