ಬರ ಪರಿಹಾರದ ಕುರಿತು ಮಹತ್ವಪೂರ್ಣ ಅಪ್ಡೇಟ್: ಸರ್ಕಾರದ ಸೌಲಭ್ಯಕ್ಕಾಗಿ ಎಫ್‌ಐಡಿ ಅವಶ್ಯಕ

ಸರ್ಕಾರದಿಂದ ದೊರೆಯುವ ಬರ ಪರಿಹಾರ, ಬೆಳೆ ವಿಮೆ ಅದು ಇನ್ನಿತರ ಸೌಲಭ್ಯಕ್ಕಾಗಿ ಎಫ್ ಐ ಡಿ ಕಡ್ಡಾಯವಾಗಿದ್ದು ಪ್ರತಿಯೊಬ್ಬರು ಎಫ್ ಐ ಡಿ ನೊಂದಣಿ ಮಾಡಿಸಿಕೊಳ್ಳಿ ಎಂದು ಕೃಷಿ ಸಹಾಯಕ ನಿರ್ದೇಶಕ ಪ್ರಾಣೇಶ್ ಹಾದಿಮನಿ ಹೇಳಿದರು. 

ಯಲಬುರ್ಗಾ ತಾಲೂಕಿನ ೬೯೩೦೨, ಕುಕನೂರು ತಾಲೂಕಿನ ೫೪, ೧೧೨ ರೈತರ ತಾಲೂಕುಗಳು ಭೂಮಿ ಪ್ರಕಾರ ದಾಖಲಾಗಿರುತ್ತವೆ.

ಅವುಗಳಲ್ಲಿ ಯಲಬುರ್ಗಾ ತಾಲೂಕಿನ ೪೯,೧೮೭ ರೈತರ ತಾಕುಗಳು ಹಾಗೂ ಕುಕುನೂರು ತಾಲೂಕಿನ ೩೯೮೯೯ ರೈತರ ತಾಲೂಕುಗಳ ಎಫ್ ಐ ಡಿ ಗೆ ಜೋಡಣೆಯಾಗಿದ್ದು, ಯಲಬುರ್ಗಾ ತಾಲೂಕಿನ ೨೦೧೧೨ ಹಾಗೂ ಕುಕುನೂರು ತಾಲೂಕಿನ ೧೪೨೧೩ ರೈತರ ತಾಲೂಕುಗಳು ಎಫ್ ಐ ಡಿ ಗೆ ಜೋಡಣೆಯಾಗುವುದು ಬಾಕಿ ಇರುತ್ತದೆ.

೨೦೨೩-೨೪ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬರ ಪರಿಹಾರಕ್ಕಾಗಿ ಈ ಎಲ್ಲಾ ರೈತರು ತಮ್ಮ ತಾಲೂಕುಗಳು ಎಫ್ ಐ ಡಿ ಗೆ ಜೋಡಣೆ ಮಾಡುವುದು ಅತಿ ಅವಶ್ಯಕವಾಗಿದ್ದು, ಪರ ಪರಿಹಾರವಲ್ಲದೆ ಬ್ಯಾಂಕುಗಳಲ್ಲಿ ಸಾಲದ ಸೌಲಭ್ಯ ಪಡೆಯಲು, ಬೆಳೆ ವಿಮೆ ಪಡೆಯಲು, ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಲು, ಕಂದಾಯ, ಪಶುಸಂಗೋಪನೆ, ಮೀನುಗಾರಿಕೆ, ತೋಟಗಾರಿಕೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಲಾಭ ಪಡೆಯಲು ಎಫ್ ಐ ಡಿ ಅತಿ ಅವಶ್ಯಕವಾಗಿದ್ದು, ಎಫ್ ಐ ಡಿ ಮಾಡಿಸದೆ ಇರುವ ರೈತರು ಬರ ಪರಿಹಾರ ಹಾಗೂ ಇನ್ನಿತರ ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆಯಿದ್ದು ರೈತರು ತಮ್ಮ ಎಲ್ಲಾ ತಾಕುಗಳನ್ನು ಎಫ್ ಐ ಡಿ ಗೆ ಜೋಡಣೆ ಮಾಡಿಸಿ ಸರ್ಕಾರದ ಲಾಭ ಪಡೆಯುವಂತೆ ತಿಳಿಸಿರುತ್ತಾರೆ.

How to check FID by Aadhar number?

ಆತ್ಮೀಯ ರೈತ ಬಾಂಧವರೇ, ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ರೈತರಿಗೆ ಬರುವಂತಹ ಅನೇಕ ಯೋಜನೆಗಳ ಲಾಭವನ್ನು ಪಡೆಯಲು FID ಬಹು ಮುಖ್ಯವಾಗಿದ್ದು, ಇದನ್ನು ನಿಮ್ಮ ಮೊಬೈಲ್ ನಲ್ಲಿ ಹೇಗೆ ಪಡೆಯಬಹುದೆಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

How to check FID by Aadhar number? 

 ರೈತರು ನಿಮ್ಮ ಮೊಬೈಲ್ ನಲ್ಲಿ ಎಫ್ ಐ ಡಿ  ( F I D ) ಪಡೆಯಲು

 ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.

step 1. ಎಫ್ ಐ ಡಿ ಪಡೆಯಲು ನಿಮ್ಮ ಮೊಬೈಲ್ ನಲ್ಲಿರುವ ಗೂಗಲ್ ಕ್ರೋಮ್ ಗೆ ಭೇಟಿ ನೀಡಿ. ನಂತರ ಸರ್ಚ್ ಆಪ್ಷನ್ ನಲ್ಲಿ

F I D ಎಂದು ಟೈಪ್ ಮಾಡಿ.

 ಅಥವಾ ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

Direct link –

https://fruitspmk.karnataka.gov.in/MISReport/GetDetailsByAadhaar.aspx

step 2. ಮೇಲಿನ ಲಿಂಕ್ ಕ್ಲಿಕ್ ಮಾಡಿದ ಮೇಲೆ ನಿಮಗೆ ಫ್ರೂಟ್ಸ್ ಐಡಿಯ ಅಧಿಕೃತ ಜಾಲತಾಣ ಕಾಣುತ್ತದೆ. ಅಲ್ಲಿ ನಿಮ್ಮ ಆಧಾರ್ ನಂಬರ್ ಅನ್ನು ಎಂಟರ್ ಮಾಡಿ ( Enter your Adhar number ).

Step 3. ಆಧಾರ್ ನಂಬರ್ ಎಂಟರ್ ಮಾಡಿದ ಮೇಲೆ ಸರ್ಚ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ಆಗ ಫಾರ್ಮರ್ ಡಿಟೇಲ್ಸ್

( Farmer Details ) ಎಂಬ ಮುಖಪುಟ ತೆರೆದುಕೊಳ್ಳುತ್ತದೆ.

 ಈ ರೀತಿ ರೈತರು ತಮ್ಮ ಮೊಬೈಲ್ ನಲ್ಲಿಯೇ ಎಫ್ ಐ ಡಿ ಸಂಖ್ಯೆಯನ್ನು ಪಡೆಯಬಹುದು.

 ಎಫ್ ಐ ಡಿ ಲಾಭಗಳೇನು? Benefits of FID

 ಎಫ್ ಐ ಡಿ ಯಿಂದ ರೈತರಿಗೆ ಮತ್ತು ರೈತರ ಮಕ್ಕಳಿಗೆ ಅನೇಕ ಲಾಭಗಳಿದ್ದು, ಈ ಸಂಖ್ಯೆಯನ್ನು ಹೊಂದಿರದೆ ಇದ್ದವರು ಹತ್ತಿರವಿರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನೊಂದಣಿ ಮಾಡಿಸಿಕೊಳ್ಳಬಹುದು. FID ಯು ಪ್ರಮುಖವಾಗಿ, ರೈತರು ಬೆಳೆ ಹಾನಿ ಪರಿಹಾರ, ಬೆಳೆ ವಿಮೆ ಹೀಗೆ ಮುಂತಾದ ಸರ್ಕಾರದಿಂದ ಬರುವ ಯೋಜನೆಗಳ ಲಾಭವನ್ನು ಪಡೆಯಲು ಅತಿ ಅವಶ್ಯಕವಾಗಿದೆ. ಇದೇ ರೀತಿ ಕರ್ನಾಟಕ ಸರ್ಕಾರದ ಹೊಸ ಯೋಜನೆ ಆಗಿರುವಂತಹ ರೈತ ವಿದ್ಯಾನಿಧಿ ( Raita Vidya nidhi ) – ಅಂದರೆ ರೈತರ ಮಕ್ಕಳಿಗೆ ನೀಡುವ ಶಿಕ್ಷಣವೇತನ ಪಡೆಯಲು ಎಫ್ ಐ ಡಿ ಯು ಅತಿ ಅವಶ್ಯಕವಾಗಿದೆ.

ನಾವು ದಿನನಿತ್ಯ ರೈತರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು  ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ.

ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,

ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

Leave a Comment