ಬರಗಾಲದ ಚಿಂತೆಯಲ್ಲಿದ್ದ ರೈತರಿಗೆ ಮತ್ತೆ ಖುಷಿ ಸುದ್ದಿ. ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರು. ಈ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

 ಮಳೆ ಇಲ್ಲ ಎಂದು ಕೈಕಟ್ಟಿ ಕುಳಿತ ರಾಜ್ಯದ ರೈತರಿಗೆ ಸಂತಸದ ಸುದ್ದಿ. ಹವಾಮಾನ ಇಲಾಖೆಯು ಮುಂದಿನ ಕೆಲ ದಿನಗಳ ಕಾಲ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ರಾಜ್ಯದ್ಯಂತ  ಒಣ ಹವೆ ( Dry climate ) ಇರಲಿದ್ದು, ಅಕ್ಟೋಬರ್ 29 ರಿಂದ ಎರಡು ದಿನಗಳ ಕಾಲ ಈ ಕೆಳಗಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುವುದು ಮತ್ತು ಯಾವ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂಬ ಸಂಪೂರ್ಣ ಮಾಹಿತಿ ಕೆಳಗಿದೆ

 ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮತ್ತು ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಮತ್ತು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.  ಉತ್ತರ ಭಾಗದ ನಾಡಿನಲ್ಲಿ ಒಣಹಾವೆ ಮುಂದುವರೆಯುವ ಸಾಧ್ಯತೆಗಳಿವೆ.

 ಹವಾಮಾನ ಇಲಾಖೆಯ ಪ್ರಕಾರ ಕೆಲವು ಜಿಲ್ಲೆಗಳಲ್ಲಿ ಮಾತ್ರ ಅಕ್ಟೋಬರ್ 29 ರಿಂದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಸೂಚಿಸಿದೆ. ಆದರೆ ಈ ಕೆಲವು ಉತ್ತರ ಒಳನಾಡಿನ ( North ) ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಗಳಿವೆ.

 ಉತ್ತರ ಭಾಗದ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ದಕ್ಷಿಣ ಒಳನಾಡಿನ ಚಿತ್ರದುರ್ಗ,ಮಂಡ್ಯ, ದಾವಣಗೆರೆ, ಮೈಸೂರು, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಉಷ್ಣಾಂಶವು ( Temperature ) ಮೊದಲಿಗಿಂತ 2° – 3° ಹೆಚ್ಚಿನ ಉಷ್ಣಾಂಶ ಹೊಂದುವ ಸಾಧ್ಯತೆಗಳಿವೆ.

 ಅದೇ ರೀತಿ ಬೆಂಗಳೂರು ನಗರ, ಗ್ರಾಮಾಂತರ, ಶಿವಮೊಗ್ಗ ಜಿಲ್ಲೆಗಳಲ್ಲಿ ಉಷ್ಣಾಂಶವು ಮೊದಲಿಗಿಂತ  1° – 2° ಹೆಚ್ಚಾಗುವ ಸಾಧ್ಯತೆಗಳಿವೆ.

 ಹಲವು ಜಿಲ್ಲೆಗಳ ಉಷ್ಣಾಂಶದ ಮಾಹಿತಿ ಈ ಹೀಗಿದೆ.

 ಉತ್ತರ ಕನ್ನಡದ ಜಿಲ್ಲೆಯ ಶಿರಾಲಿಯಲ್ಲಿ ಗರಿಷ್ಠ ಉಷ್ಣಾಂಶವು ( Maximum Temperature ) 36.6° ದಾಖಲಾಗಿದೆ ಮತ್ತು  ಬೀದರ್ ಜಿಲ್ಲೆಯಲ್ಲಿ 15.6° ಕನಿಷ್ಠ ಉಷ್ಣಾಂಶವು ( Minimum Temperature ) ದಾಖಲಾಗಿದೆ.

 ಕರ್ನಾಟಕ ರಾಜ್ಯದ್ಯಂತ ರೈತರು ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಸಂಪೂರ್ಣ ಕಂಗಲಾಗಿದ್ದಾರೆ ಮತ್ತು ಹಲವು ಜಿಲ್ಲೆಯ ರೈತರು ಹಿಂಗಾರು ಮಳೆ ನಂಬಿ ಮುಂಗಾರು ಮಳೆಯನ್ನು ಕೂಡ ಬಿತ್ತನೆ ಮಾಡಿದ್ದಾರೆ. ಈ ಹವಮಾನ ಇಲಾಖೆಯ ಸುದ್ದಿ ಹವಾಮಾನ ಇಲಾಖೆಯ ಪ್ರಕಾರ ಅಕ್ಟೋಬರ್ 29 ರಿಂದ ಮಳೆಯಾಗುವುದು ಎಂಬ ಸುದ್ದಿ ರೈತರಿಗೆ ಖುಷಿ ತರುವುದೋ ಅಥವಾ ಬೇಸರ ಮೂಡಿಸುವುದೋ ಎಂದು ಕಾಯ್ದು ನೋಡಬೇಕು.

Read these also:

1.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

2.HEAVY RAIN: ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ:ದಸರಾ ಹಬ್ಬದ ದಿನವಾದ ಸೋಮವಾರ ಮತ್ತುಮಂಗಳವಾರ ಭಾರೀ ಮಳೆ

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

3.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

4.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

Leave a Comment