ವಾರದಲ್ಲಿ ಕೇಂದ್ರಕ್ಕೆ ಬರ ವರದಿ ಸಲ್ಲಿಕೆ. 5ರಿಂದ 6 ಸಾವಿರ ಕೋಟಿ ರು. ಪರಿಹಾರದ ನಿರೀಕ್ಷೆ: ಕೃಷ್ಣಬೈರೇಗೌಡ

ಕಳೆದ ವಾರವಷ್ಟೇ 195 ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿಸಿದ್ದ ರಾಜ್ಯ ಸರಕಾರ, ಇದೀಗ ನ್ನೊಂದು ವಾರದಲ್ಲಿ ಬರಪೀಡಿತ ಪ್ರದೇಶದ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲು ತೀರ್ಮಾನಿಸಿದೆ. ಕಂದಾಯ ಇಲಾಖೆ, ಕೃಷಿ ಇಲಾಖೆ ಅಧಿಕಾರಿಗಳು ಈಗಾಗಲೇ ವರದಿಗೆ ಅಗತ್ಯವಿರುವ ಮಾಹಿತಿ ಸಿದ್ಧಪಡಿಸಿದ್ದು, ಮುಂದಿನ ವಾರ ಕೇಂದ್ರ ಕೃಷಿ ಇಲಾಖೆಗೆ ಬರಪೀಡಿತ ವರದಿ ಸಲ್ಲಿಸಲು ಮುಂದಾಗಿದೆ. ಈ ಮೂಲಕ ಪ್ರಸಕ್ತ ವರ್ಷ ಬರಪೀಡಿತ ವರದಿಯನ್ನು ಸಲ್ಲಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ ಎನಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ರಾಜ್ಯದ 195 ತಾಲೂಕು ಗಳನ್ನು ಬರಪೀಡಿತ ತಾಲೂಕುಗಳು ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ. ಈ ತಾಲೂಕು ಗಳಿಗೆ ಕೇಂದ್ರದಿಂದ ಬರಬೇಕಿರುವ ಪರಿಹಾರ ಪಡೆಯಲು ವರದಿಯನ್ನು ವಾರದಲ್ಲಿ ಸಲ್ಲಿಸಲಾಗು ವುದು. ಅಂದಾಜಿನ ಪ್ರಕಾರ 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಮತ್ತು 2 ಲಕ್ಷ ಹೆಕ್ಟೇ‌ನಷ್ಟು ತೋಟಗಾರಿಕೆ ಬೆಳೆ ಪಾನಿಯಾ ಗಿದೆ. ಬರ ತಾಲೂಕುಗಳುಗಳಿಗೆ ಸಂಬಂಧ ಪಟ್ಟಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲು ಬೇಕಾಗಿರುವ ವರದಿ ಯನ್ನು ತ್ವರಿತವಾಗಿ ತಯಾರಿಗೊಳಿ ಸುವಂತೆ ಅಧಿಕಾರಿ ಗಳಿಗೆ ಸೂಚಿಸಲಾಗಿದೆ ಎಂದರು.

ಈಗಾಗಲೇ ವರದಿ ಸಿದ್ಧಪಡಿಸುವ ಕಾರ್ಯಶೇ.70ರಷ್ಟು ಮುಗಿದಿದೆ. ಮೇವಿಗೂ, ಕುಡಿಯುವ ನೀರಿಗೂ ಪ್ರತ್ಯೇಕ ಪರಿಹಾರದ ಅವಕಾಶವಿದ್ದು, ಮುಂದಿನ ಮೂರು ದಿನದಲ್ಲಿ ಈ ಎಲ್ಲವನ್ನೂ ಸೇರಿಸಿ ಸಂಪೂರ್ಣ ವರದಿ ಸಲ್ಲಿಸಲಾಗುವುದು. ಎನ್‌ಡಿಆರ್ ಎಫ್ ನಿಯಮದ ಅನ್ವಯ ಐದರಿಂದ ಆರು ಸಾವಿರ ಕೋಟಿ ರು. ಪರಿಹಾರ ಪಡೆಯಲು ಅವಕಾಶವಿದೆ. ಕೇಂದ್ರಕ್ಕೆ ಮನವಿ ಸಲ್ಲಿಸಿದ ಕೂಡಲೇ ಕೇಂದ್ರದ ಅಧಿಕಾರಿಗಳೂ ರಾಜ್ಯಕ್ಕೆ ಬಂದು ಪರಿಶೀಲನೆ ನಡೆಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮನವಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಿ ಅನುಮೋದನೆ ಪಡೆದು ಈ ವಾರಾಂತ್ಯದೊಳಗೆ ಸಲ್ಲಿಸಲಾಗುವುದು.

2ನೇ ಹಂತದಲ್ಲಿ ಘೋಷಣೆ:

ಕೇಂದ್ರ ಮಾರ್ಗಸೂಚಿ ಬರ 161 ತಾಲೂಕುಗಳಲ್ಲಿ ತೀವ್ರ ಬರ ಎದುರಾಗಿದೆ. 34 ತಾಲೂಕುಗಳಲ್ಲಿ ಭಾಗಶಃ ಬರದ ಸ್ಥಿತಿ ಇದೆ. ಈ 2ನ್ನೂ ಸೇರಿಸಿ ಕಳೆದ ವಾರ 195 ತಾಲೂಗಳಲ್ಲಿ ಬರ ಘೋಷಿಸ ಲಾಗಿದೆ. ಇನ್ನೂ 41 ತಾಲೂಕುಗಳಲ್ಲೂ ಪರಿಸ್ಥಿತಿ ಬಿನ್ನ ಇಲ್ಲ. ಕೇಂದ್ರದ ಮಾರ್ಗಸೂಚಿಯಂತೆ ಈ ತಾಲೂಕು ಗಳಲ್ಲಿ ಬರ ಘೋಷಣೆ ಸಾಧ್ಯವಿಲ್ಲ. ಅಕ್ಟೋಬರ್, ತಿಂಗಳ ಕೊನೆಯವರೆಗೆ ಬೆಳೆ ಸಮೀಕ್ಷೆ ನಡೆಸಿ ಬರ ಘೋಷಣೆಗೆ ಅವಕಾಶ ಇದೆ. ಹೀಗಾಗಿ 195 ತಾಲೂಕು ಗಳೇ ಅ೦ತಿಮವಲ್ಲ, ಬದಲಾಗಿ ಅಕ್ಟೋಬರ್ ತಿಂಗಳ ಮಳೆ ಪರಿಸ್ಥಿತಿ ಗಮನಿಸಿ ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಆಧರಿಸಿ ಮತ್ತೊಂದಷ್ಟು ತಾಲೂಕುಗಳನ್ನೂ ಎರಡನೇ ಪಟ್ಟಿಯಲ್ಲಿ ಬರ ಪೀಡಿತ ಎಂದು ಘೋಷಿಸಲಾಗುವುದು. ಈ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಸದ್ಯಕ್ಕೆ ಕುಡಿಯುವ ನೀರಿಗೆ ತೀವ್ರ ಅಭಾವವಿಲ್ಲ. ಕುಡಿಯುವ ನೀರಿನ ಪೂರೈಕೆ ಸಲುವಾಗಿಯೇ ಎಲ್ಲಾ ಜಿಲ್ಲಾ ಪಂಚಾಯತ್ಸಿಇಓಗಳ ಖಾತೆಗೆ ತಲಾ ಒಂದು ಕೋಟಿ ರು. ವರ್ಗಾಯಿಸಲಾಗಿದೆ. ಅಲ್ಲದೆ, ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 462 ಕೋಟಿ ರು ಇದೆ. ಈ ಹಣವನ್ನು ಕುಡಿಯುವ ನೀರು ಪೂರೈಕೆಗೆ ಬಳಸಲು ಸೂಚಿಸ ಲಾಗಿದೆ. ಹಣದ ಅಗತ್ಯವಿದ್ದರೆ ಪೂರೈಸಲಾ ಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ ಎಂದರು.

 

Leave a Comment