12ನೇ ತರಗತಿ ಪಾಸಾದವರಿಗೆ, ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಅನೇಕ ಹುದ್ದೆಗಳಿಗೆ Gram panchayat recruitment

 ಕರ್ನಾಟಕ ರಾಜ್ಯದಲ್ಲಿ ಪ್ರತಿ ಜಿಲ್ಲೆಯ ಗ್ರಾಮ ಪಂಚಾಯತ್ ನಲ್ಲಿ ಡಾಟಾ ಎಂಟ್ರಿ ಆಪರೇಟರ್ ( Data entry operator ) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಲಾಯವು ಆದೇಶ ಹೊರಡಿಸಿದೆ.

 ಈ ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಆದೇಶ ಹೊರಡಿಸಿರುವ ಬಗ್ಗೆ ಬೇಕಾದ ಪೂರ್ಣ ಮಾಹಿತಿ ತಿಳಿಯಲು ಈ ಕೆಳಗಿನ ಲೇಖನವನ್ನು ಓದಿ.

Gram panchayat recruitment – ಕರ್ನಾಟಕ ರಾಜ್ಯದಲ್ಲಿ ಪ್ರತಿಯೊಂದು ಪಂಚಾಯಿತಿಗೆ ಒಬ್ಬರಂತೆ ಸುಮಾರು 5900ಕ್ಕೂ ಹೆಚ್ಚು ಡಾಟಾ ಎಂಟ್ರಿ ಆಪರೇಟರ್  ( Data entry operator ) ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಆದೇಶ ಹೊರಡಿಸಿದೆ. ಆದೇಶದ ಪ್ರಕಾರ ಈ ಹುದ್ದೆಗಳ ನೇಮಕಾತಿ ಸಂಪೂರ್ಣ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳ ಕೈಯಲ್ಲಿದ್ದು, ಕೂಡಲೇ ನೇಮಕಾತಿಯನ್ನು ಮಾಡಲು ಸಕಲಸಿದ್ಧತೆ ಮಾಡಿಕೊಳ್ಳಬೇಕೆಂದು ಆದೇಶ ಹೊರಡಿಸಿದೆ.

 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರಿರುತ್ತಾರೆ?

 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಯುಸಿ ಮುಗಿಸಿದವರು ಅರ್ಹರಿರುತ್ತಾರೆ ಮತ್ತು ಇದರ ಜೊತೆಗೆ ಮೂರು ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು.

 ಡಾಟಾ ಎಂಟ್ರಿ ಆಪರೇಟರ್ ವೇತನ –

 ಡಾಟಾ ಎಂಟ್ರಿ ಆಪರೇಟರ್ ಆಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳ ಸಂಬಳ 16 ಸಾವಿರ ರೂಪಾಯಿ ಇರುತ್ತದೆ. ಆದೇಶದ ಪ್ರಕಾರ ಡಾಟಾ ಎಂಟ್ರಿ ಆಪರೇಟರ್ಸ್ ಗಳಿಗೆ, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಬರುವ ಮೊತ್ತದಿಂದ ಇವರ ವೇತನವನ್ನು ನೀಡಬೇಕೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

 ರಾಜ್ಯದ್ಯಂತ ಸುಮಾರು 5 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ, ಸರ್ಕಾರಿ ನೌಕರಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಸರ್ಕಾರದ ಈ ಒಂದು ಬೃಹತ್ ನೇಮಕಾತಿಯು ನಿರುದ್ಯೋಗಿಗಳಿಗೆ ಸಂತಸವನ್ನು ತಂದಿದೆ.  

ನಾವು ದಿನನಿತ್ಯ ನಿಮಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು  ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

Leave a Comment