ಬೆಳೆ ಪರಿಹಾರ, ಬೆಳೆ ವಿಮೆ ಪಡೆಯಬೇಕೆಂದರೆ ರೈತರು ಕೂಡಲೇ ಈ ಕೆಲಸ ಮಾಡಿ

ಆತ್ಮೀಯ ರೈತ ಬಾಂಧವರೇ, ಇಂದಿನ ಕಾಲದಲ್ಲಿ ಪ್ರತಿಯೊಂದು ಕೂಡ ಡಿಜಿಟಲ್ ಆಗುತ್ತಿದ್ದು,

ಇದೀಗ ನಮ್ಮ ಕೃಷಿ ಹಾಗೂ ಕಂದಾಯ ಇಲಾಖೆಯು ಕೂಡ ರೈತರ ಜಮೀನಿನ ಪಹಣಿಗಳನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ಮುಂದಾಗಿವೆ.

ಮುಂದಿನ ದಿನಗಳಲ್ಲಿ ನೀವು ಸರಿಯಾಗಿ ಬೆಳೆ ಪರಿಹಾರ ಹಾಗೂ ಬೆಳೆ ವಿಮೆ ಪಡೆಯಬೇಕಾದರೆ ಕೂಡಲೇ ಈ ಕೆಲಸವನ್ನು ಮಾಡಲೇಬೇಕು.

ಏಕೆಂದರೆ ಹಿಂದಿನ ದಿನಗಳಲ್ಲಿ ನಾವು FID ಇಲ್ಲದೆ ಬೆಳೆ ವಿಮೆ ಹಾಗೂ ಬೆಳೆ ಪರಿಹಾರವನ್ನು ಪಡೆಯುತ್ತಿದ್ದೆವು ಆದರೆ ಈ ವರ್ಷದಿಂದ FID ಇದ್ದವರಿಗೆ ಮಾತ್ರ ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ಪಡೆಯಲು ಸಾಧ್ಯವಿದೆ.

ಹಾಗಾಗಿ ಮುಂದಿನ ತಯಾರಿಗಾಗಿ ನಾವು ಆದಷ್ಟು ಬೇಗ ನಮ್ಮ್ ಆಧಾರ್ ಕಾರ್ಡ್ ಅನ್ನು ಪಹಣಿಯೊಂದಿಗೆ ಲಿಂಕ್ ಮಾಡಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕಾಗಿ ವಿನಂತಿ.

ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4) (బి) (2)d అది ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿಯನ್ನು ನೀಡಲಾಗಿದ್ದು.

ಜಿಲ್ಲೆಯ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾ‌ರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್(ಜಾಲತಾಣ)

 

 https://landrecords.karnataka.gov.in/service4

 

ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಛೇರಿ ಪ್ರಕಟಣೆ ತಿಳಿಸಿದೆ.

READ THIS ALSO:

ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಹೇಗೆ? 

ನಿಮ್ಮ ಮೊಬೈಲ್ ನಲ್ಲಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದನ್ನು ನೋಡೋಣ.

ಮೊದಲಿಗೆ ನಿಮ್ಮ ಮೊಬೈಲ್ ನಲ್ಲಿ ಸಂರಕ್ಷಣೆ ಎಂದು ಸರ್ಚ್ ಮಾಡಿ ಅಥವಾ ಟೈಪ್ ಮಾಡಿ:

ಡೈರೆಕ್ಟ್ ಲಿಂಕ್ ಆಗಿ ಇಲ್ಲಿ ಕ್ಲಿಕ್ ಮಾಡಿ:

https://samrakshane.karnataka.gov.in/

Step 1:ಅಲ್ಲಿ ನಿಮಗೆ ಒಂದು ಹೊಸ ಓಪನ್ ಆಗುತ್ತೆ ಅದರಲ್ಲಿ ನೀವು ಬೆಳೆ ವಿಮೆ ಮಾಡಿಸಿರ್ತಕ್ಕಂತ ಋತು, ವರ್ಷ ಹಾಕಿ ಗೋ (GO)ಬಟನ್ ಅನ್ನು ಒತ್ತಿ

  • ಆಗ ಅಲ್ಲಿ ವರ್ಷ ಹಾಗೂ ಋತುವಿನ ಆಯ್ಕೆ ಮಾಡಿ
  • ವರ್ಷ 2023-24
  •  ಋತು ಮುಂಗಾರು( kharif)
  • ಮುಂದೆ/GO ಬಟನನ್ನು ಒತ್ತಿ

Step 2: ಅದಾದ ನಂತರ ನಿಮಗೆ ಮತ್ತೊಂದು ಹೊಸ ವಿಂಡೋ ಓಪನ್ ಆಗುತ್ತೆ, ಅಲ್ಲಿ ನೀವು ಫಾರ್ಮರ್ ಕಾರ್ನರ್ ಅಡಿಯಲ್ಲಿ ಇರುವಂತಹ Check status ಆಪ್ಷನ್ ಅನ್ನು ಆಯ್ಕೆ ಮಾಡಿಕೊಳ್ಳಿ.

ಅಲ್ಲಿ ಮೊದಲನೇ ಆಪ್ಷನ್ ಆದಂತಹ ಪ್ರಪೋಸಲ್ ಮಾರ್ಕ್ ಮಾಡಿ ಅಥವಾ ಕ್ಲಿಕ್ ಮಾಡಿ

ನಂತರ ನಿಮ್ಮ ಪ್ರಪೋಸ ನಂಬರ (ಅಪ್ಲಿಕೇಶನ್ no) ಅಲ್ಲಿ ನಮೂದಿಸಿ ನಂತರ ಕ್ಯಾಚ್ ಅಪ್ ಕೋಡ್ ಟೈಪ್ ಮಾಡಿ ಸರ್ಚ್ ಬಟನ್ ಒತ್ತಿ.

ಅದಾದ ನಂತರ ನಿಮಗೆ ಯಾವ ಬೆಳೆಗೆ ನೀವು ಬೆಳೆ ವಿಮೆ ಮಾಡಿಸಿದ್ದೀರಿ ಹಾಗೂ ಎಷ್ಟು ರೂಪಾಯಿಗಳು ಮಧ್ಯಂತರ ಹಣ

ನಿಮ್ಮ ಖಾತೆಗೆ ಬಿಡುಗಡೆಯಾಗಿದೆ ಎಂಬುದರ ಮಾಹಿತಿಯನ್ನು ನೀವು ಇದರ ಮೂಲಕ ಪಡೆಯಬಹುದು

ಈ ರೀತಿ ನಿಮಗೂ ನಿಮ್ಮ ಬೆಳೆವಿಮೆ ಸ್ಟೇಟಸ್ ನಲ್ಲಿ Payment process in progress ಈ ರೀತಿ ಇದ್ದರೆ ನಿಮಗೆ ಇನ್ನೇನು ಕೆಲ ದಿನಗಳಲ್ಲಿ ಬೆಳೆ ವಿಮೆ ಜಮಾ ಆಗಲಿದೆ

Read these also:

ಮಾರ್ಚ್ ಅಂತ್ಯದ ವೇಳೆಗೆ 5 ಲಕ್ಷ ರೈತರಿಗೆ 800 ಕೋಟಿ ರೂಪಾಯಿ ಬೆಳೆ ವಿಮೆ ಬಿಡುಗಡೆ

ಕರ್ನಾಟಕ ರಾಜ್ಯದ ಕೃಷಿ ಸಚಿವರಾದಂತಹ N. ಚೆಲುವರಾಯಸ್ವಾಮಿ ಯವರು  ನಾಗಮಂಗಲದಲ್ಲಿ ನಡೆದಂತಹ ಸಮಾರಂಭದಲ್ಲಿ ಮಾತನಾಡಿ ಮಾರ್ಚ್ ಅಂತ್ಯದ ವೇಳೆಗೆ 5 ಲಕ್ಷ ರೈತರಿಗೆ 800 ಕೋಟಿ ರೂಪಾಯಿಗಳನ್ನು ರೈತರ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು ಹೇಳಿದರು.

ಕರ್ನಾಟಕದಲ್ಲಿ 25 ಲಕ್ಷ ರೈತರು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ನೋಂದಾಯಿಸಿಕೊಂಡಿದ್ದು ಅದರಲ್ಲಿ 13 ಲಕ್ಷ ರೈತರಿಗೆ 1400 ಕೋಟಿ ರೂಪಾಯಿಗಳ ಬೆಳೆ ವಿಮೆಯನ್ನು ಕ್ಲೇಮ್ ಮಾಡಲಾಗುವುದು ಎಂದು ಹೇಳಿದರು.

ಈಗಾಗಲೇ ಮಧ್ಯಂತರ ಬೆಳೆ ವಿಮೆಯನ್ನು ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಲಾಗಿದ್ದು ಪೂರ್ಣ ಪ್ರಮಾಣದ ಬೆಳೆ ವಿಮೆಯ ಹಣವನ್ನು ಮಾರ್ಚ್ ಅಂತ್ಯಕ್ಕೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಸದ್ಯಕ್ಕೆ 8 ಲಕ್ಷ ರೈತರು ಖಾತೆಗಳಿಗೆ 600 ಕೋಟಿಗಳನ್ನು ಬಿಡುಗಡೆ ಮಾಡಲಾಗಿದ್ದು ಉಳಿದ 5 ಲಕ್ಷ ರೈತರ ಖಾತೆಗೆ 800 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

 

👉How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

https://krishisuddi.com/how-to-check-all-lands-are-connected-to-fid-number/

👉ಈ ದಿನಾಂಕದೊಳಗೆ FID ಮಾಡಿಸದಿದ್ದರೆ ನಿಮಗೆ ಬೆಳೆ ಪರಿಹಾರದ ಹಣ ಸಿಗುವುದಿಲ್ಲ

https://krishisuddi.com/last-date-for-fid/

👉How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

https://krishisuddi.com/how-to-check-all-lands-are-connected-to-fid-number/

👉ಈ ದಿನಾಂಕದೊಳಗೆ FID ಮಾಡಿಸದಿದ್ದರೆ ನಿಮಗೆ ಬೆಳೆ ಪರಿಹಾರದ ಹಣ ಸಿಗುವುದಿಲ್ಲ

https://krishisuddi.com/last-date-for-fid/

 

By Raju

Leave a Reply

Your email address will not be published. Required fields are marked *