ಆತ್ಮೀಯ ರೈತ ಬಾಂಧವರೇ, ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳ ಅಡಿ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆದಷ್ಟು ಬೇಗ ಅರ್ಹ ಹಾಗೂ ಆಸಕ್ತ ರೈತರು ಅರ್ಜಿಗಳನ್ನು ಸಲ್ಲಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿ.

ಹಾವೇರಿ, ೨೬ : ಜಿಲ್ಲೆಯಲ್ಲಿ ಪ್ರಸಕ್ತ ೨೦೨೩- ೨೪ನೇ ಸಾಲಿಗೆ ಪ್ರಧಾನಮಂತ್ರಿ ಮತ್ರ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.

ಯಾವ ಯಾವ ಯೋಜನೆಗಳು?

ಮೀನುಕೊಳ ನಿರ್ಮಾಣ

ಬಯೋಪ್ಲಾಕ್ ಆರ್‌ಎಎಸ್ ಮೀನು ಕೃಷಿ

ಇತರೆ ಯೋಜನೆಗಳಡಿ ಮತ್ತು ಮೀನುಗಾರಿಕೆ ಇಲಾಖೆಯ ರಾಜ್ಯ, ಜಿಲ್ಲಾ ಇತರೆ ವಿವಿಧ ಯೋಜನೆಗಳಡಿ ಕಾರ್ಯಕ್ರಮ ಅನುಷ್ಠಾನಕ್ಕೆ ಸಾಮಾನ್ಯ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಸಕ್ತ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತರು ಸಂಬಂಧಿಸಿದ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ತೆರಳಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಆಸಕ್ತ ರೈತರು ದಿನಾಂಕ ೨೦-೦೬-೨೦೨೩ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಯಾರನ್ನು ಸಂಪರ್ಕಿಸಬೇಕು?

ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

By Raju

Leave a Reply

Your email address will not be published. Required fields are marked *