ಆತ್ಮೀಯ ವಿದ್ಯಾರ್ಥಿಗಳೇ, ನಿಮ್ಮ ಬಸ್ ಪಾಸ್ ಅವಧಿ ಮುಗಿದಿದೆ, ಆದರೆ ಇನ್ನು ನಿಮ್ಮ ಪರೀಕ್ಷೆಗಳು ಮುಗಿದಿಲ್ಲವೇ? ನಿಮಗಾಗಿ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದ್ದು ಹಳೆ ಬಸ್ ಪಾಸ್ ನಲ್ಲಿ ಜೂನ್ 15 ರವರೆಗೆ ನೀವು ಚಲಿಸಬಹುದಾಗಿದೆ.

ಪ್ರಸಕ್ತ ೨೦೨೩-೨೪ನೇ ಸಾಲಿನಲ್ಲಿ ಶಾಲಾ- ಕಾಲೇಜುಗಳಿಗೆ ದಾಖಲಾದ ವಿದ್ಯಾರ್ಥಿಗಳು ಶುಲ್ಕ ಪಾವತಿಸಿದ ರಸೀದಿ ಅಥವಾ ೨೦೨೨-೨೩ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ ಜೂನ್ ೧೫ರವರೆಗೆ ನಿಗಮದ ಬಸ್ಸುಗಳಲ್ಲಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ವಿದ್ಯಾರ್ಥಿ ಉಚಿತ ಬಸ್ ಪಾಸ್ ವಿತರಣೆ ಕಾರ್ಯವನ್ನು ಇ.ಡಿ.ಸಿ.ಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸಲಾಗುತ್ತಿದೆ.

ಇಡಿಸಿಎಸ್ ಇಲಾಖೆಯು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಹಾಗೂ ಪಾಸು ಪಡೆಯಲು ಕಾಲಾವಕಾಶ ನೀಡಬೇಕಾಗಿರುವುದರ ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮವಹಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

By Raju

One thought on “ವಿದ್ಯಾರ್ಥಿಗಳಿಗೆ free bus ಪ್ರಯಾಣಕ್ಕೆ ಅವಕಾಶ:june 15 ರ ವರೆಗೆ ಅವಕಾಶ”

Leave a Reply

Your email address will not be published. Required fields are marked *