30 ದಿನಗಳ ಕಾಲ ಉಟೋಪಚಾರ ಹಾಗೂ ವಸತಿಯೊಂದಿಗೆ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ, ೨೦ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಟಾಟಾ ಮೋಟರ್ಸ್ ಧಾರವಾಡ ಇವರ ಜಂಟಿ ಸಹಯೋಗದಲ್ಲಿ ನಡೆಯುವ ೩೦ ದಿನಗಳ ಲಘು ವಾಹನಾ ಚಾಲನ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಗಾಗಿ ೨೦ ರಿಂದ ೪೫ ವರ್ಷದೊಳಗಿನ ಯುವಕರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳ ಅರ್ಜಿಯನ್ನು ಜುಲೈ ೩೧ರೊಳಗಾಗಿ ಸಲ್ಲಿಸಬೇಕು.

ತರಬೇತಿ ಅವಧಿಯಲ್ಲಿ ಊಟೋಪಚಾರ ಹಾಗೂ ವಸತಿ ಸಂಪೂರ್ಣ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ವಿಸ್ತರಣಾ ಕೇಂದ್ರ, ಹಸನಮಾಳ, ದಾಂಡೇಲಿ-೫೮೧೩೨೫, ದೂ.ಸಂಖ್ಯೆ: ೦೮೨೮೪-೨೯೮೫೪೭, ೯೬೩೨೧೪೩೨೧೭, ೯೪೪೯೭೮೨೪೨೫ಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

 

Leave a Comment