sarathi yojana

 ಆತ್ಮೀಯ ಬಾಂಧವರೇ, ಟ್ಯಾಕ್ಸಿ / ಗೂಡ್ಸ್ / ಪ್ಯಾಸೆಂಜರ್ ಆಟೋ ರಿಕ್ಷಾ ವಾಹನ ಖರೀದಿಗಾಗಿ 3 ಲಕ್ಷ ರೂಪಾಯಿಗಳವರೆಗೆ ಸಹಾಯಧನ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆದಷ್ಟು ಬೇಗ ಅರ್ಜಿಗಳನ್ನು ಸಲ್ಲಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿ.

ಅಧಿಕೃತ ತಾಣಕ್ಕೆ ಭೇಟಿ ನೀಡಲು ಈ ಕೆಳಗಡೆ ಇರುವ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ:

https://kmdc.karnataka.gov.in/#.

ಸ್ವಾವಲಂಬಿ ಸಾರಥಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ:

https://kmdc.karnataka.gov.in/23/subsidy-/kn

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ:

https://kmdconline.karnataka.gov.in/Portal/login

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟಂಬರ್ 25 2023

ಈ ಯೋಜನೆಯಡಿ ಸಹಾಯಧನ ಪಡೆಯಲು ಸರ್ಕಾರದಿಂದ ಬಿಡುಗಡೆಯಾದಂತಹ ಮಾರ್ಗಸೂಚಿಗಳು:

1.ಈ ಯೋಜನೆಯನ್ನು ನಿಗಮದ ವತಿಯಿಂದ ರಾಷ್ಟ್ರೀಕೃತ/ಷೆಡ್ಯೂಲ್ಡ್ ಬ್ಯಾಂಕ್‍ಗಳ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತದೆ.
2.ಬ್ಯಾಂಕುಗಳಿಂದ ಸಾಲ ಮಂಜೂರಾತಿ ನೀಡಿದ/ಪಡೆದ ಫಲಾನುಭವಿಗಳಿಗೆ ಆಟೋರಿಕ್ಷ / ಗೂಡ್ಸ್ ವಾಹನ /ಟ್ಯಾಕ್ಸಿ ಖರೀದಿಸಲು ವಾಹನದ ಮೌಲ್ಯದ ಶೇ.50 ರಷ್ಟು ಸಹಾಯಧನ ಗರಿಷ್ಠ ರೂ.3.00 ಲಕ್ಷವನ್ನು ನೀಡಲಾಗುವುದು.
3.ಮಹಿಳೆಯರಿಗೆ ಆದ್ಯತೆಯನ್ನು ನೀಡಲಾಗುವುದು.
4.ಈ ಯೋಜನೆಯಡಿ ಖರೀದಿಸಲಾಗಿರುವ ವಾಹನವನ್ನು ಫಲಾನುಭವಿಗಳು ಸಾಲದ ಅವಧಿಯಲ್ಲಿ ಇತರರಿಗೆ ಪರಭಾರೆ ಮಾಡಬಾರದು
5.ಫಲಾನುಭವಿಯು ಈ ವಾಹನದಿಂದ ಲಭ್ಯವಾಗುವ ವಾರ್ಷಿಕ ಆದಾಯದ ವಿವರ, ಖರೀದಿ ಮಾಡಿದ ತಕ್ಷಣ ತೆರಿಗೆಯನ್ನು ಪಾವತಿಸಿರುವ ಮತ್ತು ವಿಮೆಯನ್ನು ಪಾವತಿಸಿರುವ ಬಗ್ಗೆ ವಿವರಗಳನ್ನು ದಾಖಲೆಗಳ ಪ್ರತಿಯೊಂದಿಗೆ ಜಿಲ್ಲಾಕಛೇರಿಗೆ ಮಾಹಿತಿಯನ್ನು ಸಲ್ಲಿಸುವುದು.
6.ಯಾವುದಾದರೂ ವಿಮೆಯನ್ನು ಕ್ಲೇಮ್ ಮಾಡಿದಲ್ಲಿ ಖರೀದಿಸಿದ ವಿವರವನ್ನು ನಿಗಮಕ್ಕೆ ನೀಡತಕ್ಕದ್ದು.
7.ನಿಗಮದ ಸಹಾಯಧನದಿಂದ ಪಡೆದ ವಾಹನ ಮೇಲೆ “ಕೆ ಎಂ ಡಿ ಸಿ ವತಿಯಿಂದ ಸಹಾಯಧನ” ಎಂದು ನಮೂದಿಸತಕ್ಕದ್ದು.
8.ನಿಗಮದಿಂದ ಪಡೆದ ವಾಹನದ ಜೊತೆಯಲ್ಲಿ ಫಲಾನುಭವಿ ಭಾವಚಿತ್ರವನ್ನು ಕಡ್ಡಾಯವಾಗಿ ಜಿಲ್ಲಾ ವ್ಯವಸ್ಥಾಪಕರು ದೃಡೀಕರಿಸಿ ಕಡತದಲ್ಲಿ ಇಡತಕ್ಕದ್ದು.

ಅರ್ಹತೆಗಳು:

(ಅ) ಅರ್ಜಿದಾರರು ರಾಜ್ಯದ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು.
(ಆ) ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
(ಇ) ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳು.
(ಈ) ಎಲ್ಲಾ ಮೂಲಗಳಿಂದ ಕೌಟುಂಬಿಕ ವಾರ್ಷಿಕ ಆದಾಯ ರೂ.4.50 ಲಕ್ಷ ದೊಳಗಿರಬೇಕು.
(ಉ)ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ/ಕೇಂದ್ರ/ಸಾರ್ವಜನಿಕ ವಲಯದ ಘಟಕ ಸರ್ಕಾರದ ಉದ್ಯೋಗಿಯಾಗಿರಬಾರದು
(ಊ)ಅರ್ಜಿದಾರರು ಆರ್.ಟಿ.ಒ.ಯಿಂದ ನೀಡಲ್ಪಟ್ಟ ಸಂಬಂಧಪಟ್ಟ ವಾಹನ ಚಾಲನಾ ಪರವಾಗಿಯನ್ನು ಹೊಂದಿರಬೇಕು
(ಋ)ಅರ್ಜಿದಾರರ ಮತ್ತು ಕುಟುಂಬದ ಸದಸ್ಯರು ವಾಹನಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ಯಾವುದೇ ಯೋಜನೆಯಡಿ ಸಾಲ ಸೌಲಭ್ಯ ಪಡೆದಿರಬಾರದು.
(ಋ) ಅರ್ಜಿದಾರರು ಕೆ ಎಂ ಡಿ ಸಿ ಯಲ್ಲಿಸುಸ್ತಿದಾರಯಾಗಿರಬಾರದು.

ದಾಖಲೆಗಳು:

1.ಆನ್‍ಲೈನ್ ಅರ್ಜಿ
2.ಫಲಾನುಭವಿಯ ಇತ್ತೀಚಿನ 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ
3.ಜಾತಿ, ಆದಾಯ ಪ್ರಮಾಣ ಪತ್ರ
4.ಆಧಾರ್ ಕಾರ್ಡ್ ಪ್ರತಿ
5.ವಾಹನ ಚಾಲನ ಪರವಾನಿಗೆ ಪ್ರಮಾಣ ಪತ್ರ
6.ಅರ್ಜಿದಾರರ ಮತ್ತು ಕುಟುಂಬದ ಸದಸ್ಯರು ವಾಹನ ಖರೀದಿಗೆ ರಾಜ್ಯ ಸರ್ಕಾರದ ಯಾವುದೇ ಯೋಜನೆಯಡಿ ಸಾಲ ಸೌಲಭ್ಯ ಪಡೆದಿಲ್ಲದಿರುವಬಗ್ಗೆ ಜಿಲ್ಲಾ ವ್ಯವಸ್ಥಾಪಕರಿಂದ ದೃಢೀಕರಣ ಪತ್ರ
7.ಈ ಯೋಜನೆಯಡಿ ಪಡೆದ ವಾಹನವನ್ನು ಯಾರಿಗೂ ಪರಭಾರೆ ಮಾಡದಿರುವ ಬಗ್ಗೆ ದೃಢೀಕರಣ ಪತ್ರ

ಆಯ್ಕೆ ಸಮಿತಿ:

1.ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳು- ಅಧ್ಯಕ್ಷರು
2 ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ- ಉಪಾಧ್ಯಕ್ಷರು
3.ಸಂಬಂಧಪಟ್ಟ ಜಿಲ್ಲೆಯ ಲೀಡ್ ಬ್ಯಾಂಕಿನ ವ್ಯವಸ್ಥಾಪಕರು – ಸದಸ್ಯರು
4.ಸಂಬಂಧಪಟ್ಟ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ -ಸದಸ್ಯರು
5.ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ- ಸದಸ್ಯರು
6.ಸಂಬಂಧಪಟ್ಟ ಜಿಲ್ಲೆಯ ಕ.ಅ.ಅ.ನಿಗಮದ ಜಿಲ್ಲಾ ವ್ಯವಸ್ಥಾಪಕರು- ಸದಸ್ಯ ಕಾರ್ಯದರ್ಶಿ

Read this also:

1.ನನ್ನ ಖಾತೆಗೆ ಇಂದು ಎರಡನೇ ತಿಂಗಳ ಅನ್ನಭಾಗ್ಯ ಯೋಜನೆಯ 510 ರೂಪಾಯಿಗಳು ಜಮೆ? ನಿಮ್ಮ ಖಾತೆಗೂ ಜಮೆಯಾಗಿದೆಯೇ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಈಗಾಗಲೇ ಶಕ್ತಿ ಯೋಜನೆ, ಗೃಹಜೋತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈಗ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಖಾತೆಗಳಿಗೆ ಜಮಯಾಗುತ್ತಿವೆ.

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :https://ahara.kar.nic.in/

2.Karnataka gruhalakshmi yojana: ಇದೆ ತಿಂಗಳ 30 ರಂದು ರಾಜ್ಯದ ಮಹಿಳೆಯರ ಖಾತೆಗೆ 2000 ರೂಪಾಯಿಗಳು ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರ  ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ karnataka gruhalakshmi yojana ಜಾರಿಗೆ ತರುವ ಮೂಲಕ  ನುಡಿದಂತೆ ನಡೆದಿದೆ.

ಈ ಯೋಜನೆಯಲ್ಲಿ ನೋಂದಾಯಿಸಿಕೊಂಡಂತಹ  ಅರ್ಹ ಮಹಿಳೆಯರಿಗೆ  ಪ್ರತಿ ತಿಂಗಳು 2000ಗಳನ್ನು ಅವರ ಖಾತೆಗಳಿಗೆ Direct benefit transfer ಮೂಲಕ ಜಮೆ ಮಾಡಲಾಗುವುದು.

Gruhalakshmi scheme official website

https://sevasindhugs.karnataka.gov.in/

3.Gruhalakshmi ಯೋಜನೆಯಡಿ 2000 ರೂಪಾಯಿ ಪಡೆಯುವವರ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದಂತಹ ಗ್ಯಾರಂಟಿಗಳಲ್ಲಿ  ಒಂದಾದಂತಹ Gruhalakshmi ಯೋಜನೆಯು ಇನ್ನೇನು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದ್ದು, ಈ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

https://ahara.kar.nic.in/WebForms/Show_Village_List.aspx

4.ಬೆಳ ಸಮಿಕ್ಷೆ ಮತ್ತೆ ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಕೂಡಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಇದೀಗ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇನ್ನು ಕೂಡ ಬೆಳೆ ಸಮೀಕ್ಷೆ ಮಾಡದಂತಹ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇https://drive.google.com/file/d/1BMliO5N8g3eJYOQ7wb6k4jdi3IbHKZoH/view

 

5.ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತಿನ ಹಣ :ನಿಮ್ಮ ಖಾತೆಗೂ ಜಮೆಯಾಗಿದೆಯೋ ಈಗಲೇ ಚೆಕ್ ಮಾಡಿಕೊಳ್ಳಿ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತು ಹಣ ಸಂದಾಯವಾಗುತ್ತಿದೆ. ರಾಜ್ಯಾದ್ಯಂತ 1.03 ಕೋಟಿ ಕಾರ್ಡ್‌ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂ. ಪಾವತಿಸಬೇಕಿದೆ.

31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಹಾಗೂ ರಾಮನಗರ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಮುಂದಿನ ಐದು ದಿನಗಳಲ್ಲಿ ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವುದಾಗಿ ಆಹಾರ ಇಲಾಖೆಮಾಹಿತಿ ನೀಡಿದೆ.

 

By Raju

Leave a Reply

Your email address will not be published. Required fields are marked *