ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ :ನೇರ ಸಂದರ್ಶನ ಮೂಲಕ ಉದ್ಯೋಗ

ಗದಗ : ಗದಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜುಲೈ 26 ರಂದು ಬೆಳಿಗ್ಗೆ 10 ರಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರೂಮ್ ನಂಬರ್-215, ಜಿಲ್ಲಾ ಆಡಳಿತ ಭವನ ಗದಗ. ಇಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ನೇರ ಸಂದರ್ಶನದಲ್ಲಿ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಗದಗ, ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಹುಬ್ಬಳ್ಳಿ, ಈ ಕಂಪನಿಗಳು ಭಾಗವಹಿಸಲಿವೆ.

ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಝರಾಕ್ಸ್ ಪ್ರತಿಗಳು, 2 ರೆಮೆ(ಬಯೋಡಾಟಾ)ಪ್ರತಿಗಳು, ಮತ್ತು ಆಧಾರ ಕಾರ್ಡ್ ಝರಾಕ್ಸ್‌ನೊಂದಿಗೆ ಭಾಗವಹಿಸಬಹುದು. ನೇರ ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ನೋಂದಣಿ ಕಡ್ಡಾಯವಾಗಿರುತ್ತದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08372-220609, 6363330688, ಸಂಪರ್ಕಿಸಬಹುದಾಗಿದೆ. ಪ್ರಭಾರಿ ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ ಪಿ ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೇರ ಸಂರ್ದಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ನೋಂದಣಿಯನ್ನು ನೇರಸಂರ್ದಶನದ ದಿನದಂದೇ ಮಾಡಿಸಬೇಕಾಗಿರುತ್ತದೆ.

 

Leave a Comment