ಸಣ್ಣ ಮತ್ತು ಅತಿ ಸಣ್ಣ ರೈತರಿಗೆ, ಆರ್‌ಬಿಐನಿಂದ ಬಂಪರ್ ಆಫರ್!  ಆರ್‌ಬಿಐನ ಹೊಸ ಮಾರ್ಗಸೂಚಿಯಿಂದ ರೈತರಿಗೆ ಅನೇಕ ಲಾಭಗಳು!

 ರೈತರ ಆದಾಯವನ್ನು ದ್ವಿಗುಣ ಗೊಳಿಸಲು ಆರ್ ಬಿ ಐ ( R B I ) ಹೊಸ ಮಾರ್ಗಸೂಚಿಯನ್ನು ಜಾರಿಗೆ ತಂದಿದೆ. ಈ ಮಾರ್ಗಸೂಚಿಯಿಂದ ರೈತರು ಬೆಳೆ ಸಾಲ ಯೋಜನೆಯನ್ನು ಪಡೆಯಲು, ಬಡ್ಡಿಯಲ್ಲಿ ಸಹಾಯಧನ, ಕೃಷಿಯೇತರ ಚಟುವಟಿಕೆಗಳಿಗೆ ಶೇಕಡ 50ರಷ್ಟು ಸಾಲ ಸೌಲಭ್ಯ ಇತರೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

 ಪ್ರಸಕ್ತ ಹಣಕಾಸು ವರ್ಷ ಅಂದರೆ 2023-24 ಅನ್ವಯ, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ನಡೆಸಲು ” ಬಡ್ಡಿ ಸಹಾಯಧನದ ಬೆಳೆ ಸಾಲ ಯೋಜನೆ” ಯನ್ನು ಮುಂದುವರಿಸಲು ಸಾರ್ವಜನಿಕ ಖಾಸಗಿ ಬ್ಯಾಂಕುಗಳು, ಗಣಕಿ ಕೃತ  ಪ್ಯಾಕ್ಸ್ ಮತ್ತು ಷೆಡ್ಯುಲ್ಡ್ ವಾಣಿಜ್ಯ ಬ್ಯಾಂಕುಗಳ ಜೊತೆಗೆ,ಹಣಕಾಸು ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ.

ಲಾಭಗಳೇನು?

  • ಬೆಳೆ ಜತೆಗೆ ಉಪಕಸಬುಗಳಿಗೆ ಶೇ.50ರಷ್ಟು ಸಾಲ ಸೌಲಭ್ಯ.  
  • ರಾಜ್ಯದ 57 ಲಕ್ಷ ಅನ್ನದಾತರಿಗೆ ಪ್ರಯೋಜನ ಅಂದಾಜು.
  • ಬರ ಹಿನ್ನೆಲೆಯಲ್ಲಿ ಸಾಲ ಪುನ‌ ರಚನೆ, ಅವಧಿ ವಿಸ್ತರಣೆ.

ವಾಣಿಜ್ಯಕ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು ಅಲ್ಪಾವಧಿ ಬೆಳೆ ಸಾಲಕ್ಕೆ ಶೇಕಡ 8.50 ಬಡ್ಡಿ ವಿಧಿಸುತ್ತವೆ. ಆದರೆ ಬ್ಯಾಂಕ್‌ಗಳ ಹಂತದಲ್ಲಿಯೇ ಕೇಂದ್ರ ಸರ್ಕಾರ ಶೇ.1.50 ಬಡ್ಡಿ ಮೊತ್ತ ಭರಿಸುವ ಕಾರಣ ಶೇ.7ಕ್ಕೆ ಇಳಿಯುತ್ತದೆ. ಅಲ್ಪಾವಧಿ ಬೆಳೆ ಸಾಲ ಕಾಲಮಿತಿ ಯೊಳಗೆ ಮರು ಪಾವತಿಸಿದರೆ ಶೇ.3 ಬಡ್ಡಿ ರಿಯಾಯಿತಿ ದೊರೆಯುತ್ತದೆ. ಅಂದರೆ ಶೇ.4ರ ಬಡ್ಡಿ ದರದಲ್ಲಿ ಗರಿಷ್ಠ ಮೂರು ಲಕ್ಷ ರೂ.ಗಳ ತನಕ ಬಡ್ಡಿಸಹಾಯಧನ ಸಾಲ ಸಿಗುತ್ತದೆ.

 ಸಣ್ಣ ಮತ್ತು ಅತಿ ಸಣ್ಣ ರೈತರೆಂದರೆ, ಒಂದು ಎಕರೆಯಿಂದ 5 ಎಕರೆ ಒಳಗೆ ಇರುವ ರೈತರು ಕೇವಲ ಕೃಷಿಯನ್ನು ನೆಚ್ಚಿಕೊಂಡರೆ, ಅವರು ಜೀವನ ನಡೆಸಲು ಕಷ್ಟ. ಆದ್ದರಿಂದ ಇಂತಹ ರೈತರಿಗೆ ಅನುಕೂಲವಾಗುವಂತೆ, ಅವರ ಆದಾಯ ದ್ವಿಗುಣಗೊಳಿಸಲು ಸರ್ಕಾರವು  ” ಮೌಲ್ಯವರ್ಧನೆ ಕೊಯ್ಲೋತ್ತರ ತಂತ್ರಜ್ಞಾನ , ಯಾಂತ್ರಿ ಕರಣ ಹಾಗೂ ರೈತ ಉತ್ಪಾದಕ ಕಂಪನಿಗಳ ಸ್ಥಾಪನೆ ಸೇರಿದಂತೆ ಇನ್ನಿತರ ರೈತ ಹಿತ ಉಪಕ್ರಮಗಳನ್ನು ಜಾರಿಗೊಳಿಸಿದೆ.

 ಬಡ್ಡಿ ಸಾಲ ಸಹಾಯಧನ ಸೇರಿದಂತೆ, ಇದರ ಜೊತೆಗೆ ರೈತರ ಉಪಕಸುಬುಗಳಾದ ಪಶು ಸಂಗೋಪನೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನು ಸಾಕಾಣಿಕೆ, ಜೇನು ಸಾಕಾಣಿಕೆ ಹಾಗೂ ಇತರೆ ಸೆಕೆಂಡರಿ ಚಟುವಟಿಕೆಗಳನ್ನು ನಡೆಸಿಕೊಂಡ ಜೀವನ ನಡೆಸಲು ಸಾಲ ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ.

 ಈ ಎಲ್ಲಾ ರೈತಪರ ಯೋಜನೆಗಳು ರೈತರಿಗೆ ಅನುಕೂಲಕರವಾಗಿದ್ದು, ಆತ್ಮೀಯ ರೈತ ಬಾಂಧವರು ಈ ಯೋಜನೆಗಳ ಸಂಪೂರ್ಣ ಲಾಭವನ್ನು ಪಡೆಯಬೇಕು.

ನಾವು ದಿನನಿತ್ಯ ರೈತರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು  ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

 

Leave a Comment