drip irrigation

ಆತ್ಮೀಯ ರೈತ ಬಾಂಧವರೇ,  ಹನಿ ನೀರಾವರಿ(DRIP IRRIGATION)  ಪದ್ಧತಿ ಅಳವಡಿಸಿಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ಹಾಗೂ ಅರ್ಹ ರೈತರು ಆದಷ್ಟು ಬೇಗ ಅರ್ಜಿಗಳನ್ನು ಸಲ್ಲಿಸಿ ಇದರ  ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿ.

ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದ ಅಡಿಯಲ್ಲಿ ತೋಟಗಾರಿಕೆ ಇಲಾಖೆಯ ಮುಖಾಂತರ, ತೋಟಗಾರಿಕೆ ಬೆಳೆಗಳಾದ, ಹಣ್ಣು ತರಕಾರಿ, ಹೂವು, ಪ್ಲಾಂಟೇಶನ್ ಬೆಳೆಗಳು, ಔಷಧಿ & ಸುಗಂಧ ಸಸ್ಯಗಳು ಹಾಗೂ ಸಾಂಬಾರು ಬೆಳೆಗಳಿಗೆ ರೈತರು ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಮುಂಡರಗಿ ತಾಲೂಕಿನ ತೋಟಗಾರಿಕೆ ಇಲಾಖೆಗೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ರೈತರು ಹನಿ ನೀರಾವರಿ ಪದ್ಧತಿ ಹೇಗೆ ಅಳವಡಿಸಿಕೊಳ್ಳಬೇಕು?

 ರೈತರು ತೋಟಗಾರಿಕೆ ಇಲಾಖೆ ವತಿಯಿಂದ ಅನುಮೋದನೆಗೊಂಡ ಕಂಪನಿ/ ಡೀಲರ್ ಅವರಿಂದ, ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬಹುದು. 

 ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ರೈತರು ಅರ್ಜಿಯೊಂದಿಗೆ ಫೋಟೋ, ಉತಾರಾ, ಖಾತೆ ಉತಾರಾ, ಬೆಳೆ ದೃಢೀಕರಣ ಪತ್ರ, ಮಣ್ಣು & ನೀರಿನ ಪರೀಕ್ಷೆ, ೨೦/-ರೂಪಾಯಿ ಛಾಪಾ ಕಾಗದದಲ್ಲಿ ಧೃಢೀಕರಣ ಪತ್ರದೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

 ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಅಭಿವೃದ್ಧಿ ಪಡಿಸುವ ರೈತರು, ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡರೆ, ನೀರಿನ ಉಳಿತಾಯ, ಕಳೆನಿಯಂತ್ರಣ, ಕಡಿಮೆ ನಿರ್ವಹಣೆ ಅಧಿಕ ಇಳುವರಿ, ಹೆಚ್ಚು ಲಾಭ ಪಡೆಯಲು ಸಾಧ್ಯವಾಗುವುದು. 

ಈಗಾಗಲೇ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು ಸಹಾಯಧನ(SUBSIDY) ಪಡೆದುಕೊಂಡಲ್ಲಿ ಅದೇ ಕ್ಷೇತ್ರಕ್ಕೆ ಸಹಾಯಧನ ನೀಡಲು ಅವಕಾಶವಿರುವುದಿಲ್ಲ.

 ಹೆಚ್ಚಿನ ಮಾಹಿತಿಗಾಗಿ ಯಾರನ್ನು ಸಂಪರ್ಕಿಸಬೇಕು?

ಆಸಕ್ತ ರೈತರು ಕೊಳವೆಬಾವಿ ಹೊಂದಿದ್ದು, ಮಣ್ಣು & ನೀರಿನ ಪರೀಕ್ಷೆ ಮಾಡಿಸಿಕೊಂಡು ಅಕ್ಟೋಬರ್ ೩೧ ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮುಂಡರಗಿ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಎಂ.ಎಂ. ತಾಂಬೋಟಿ (ಜಿ.ಪಂ) ಮುಂಡರಗಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read these also:

1.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

2.HEAVY RAIN: ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ:ದಸರಾ ಹಬ್ಬದ ದಿನವಾದ ಸೋಮವಾರ ಮತ್ತುಮಂಗಳವಾರ ಭಾರೀ ಮಳೆ

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

3.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

4.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

By Raju

Leave a Reply

Your email address will not be published. Required fields are marked *