ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು ಕಾಮನ್ ಅಲಟಿರ್ಂಗ್ ಟೋಕಾಲ್ ಮುಖಾಂತರ ಬರುವ ಮಸೇಜ್‌ಗಳನ್ನು ಮೊಬೈಲ್‌ನಲ್ಲಿ ಗಮನಿಸಿಸುವುದು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು.

ಗುಡುಗು- ಅಥವಾ ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊಡಿಸಿರುವ ಮನೆಗಳು ಸುರಕ್ಷಿತವಲ್ಲ ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯಪಡೆಯುವುದು. ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು.

ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್‌ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು. ಚಾಲನೆಯಲ್ಲಿದ್ದರೆ ತಕ್ಷಣವೇ ನಿಲ್ಲಿಸಿ ವಾಹನದಲ್ಲಿಯೇ ವಾಹನ ಆಶ್ರಯ ಪಡೆಯುವುದು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದರೆ ಅಂತರವನ್ನು ಕಾಯ್ದುಕೊಳ್ಳುವುದು. ಗುಡುಗು ಮತ್ತು ಸಿಡಿಲಿನ ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ. ಕಿವಿಗಳನ್ನು ಮುಚ್ಚಿಕೊಳ್ಳುವುದು.ವಿದ್ಯುತ್ ಸಾಧ್ಯತೆ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು

ಇವು ಮಿಂಚನ್ನು ಆಕರ್ಷಿಸುತ್ತವೆ.

ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು.

ಲೋಹದ ವಸ್ತುಗಳನ್ನು ಬಳಸಬಾರದು.

ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು

ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸಬಾರದು

ಕಬ್ಬಿಣದ ಸರಳುಗಳಿ೦ದ ಕೂಡಿದ ಛತ್ರಿಗಳನ್ನು ಬಳಸಬಾರದು.

ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್‌ ಶಕ್ತಿ ಸಂಪರ್ಕದಿಂದ ದೂರವಿರುವುದು.

ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು, ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರ ಯಾವುದೇ ಅವಶೇಷಗಳನ್ನು ತೆಗೆದು ಹಾಕುವುದು.

ಸಿಡಿಲು ಸಂದರ್ಭದಲ್ಲಿ, ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ಹಾಗೂ ಬಟ್ಟೆ ತೊಳೆಯಬಾರದು. ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು.

ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು, ಗುಡುಗು ಸಿಡಿಲಿನ ಸಮಯದಲ್ಲಿ, ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು.

ಆಟದ ಮೈದಾನ, ಉದ್ಯಾನವನಗಳು ಈಜುಕೂಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು. ದೋಣಿ ವಿಹಾರ ಅಥವಾ ಈಜುತ್ತಿದ್ದ ರೆ. ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯಪಡೆಯುವುದು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ, ವಾಹನದ ಒಳಗೆ ಇರುವುದು. ಅರಣ್ಯ ಪ್ರದೇಶದಿಂದ, ಗಿಡಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವುದು, ಮಿಂಚಿನ ಹೊಡೆತದಿಂದಾಗಿ ಕಾಡಿಚ್ಚು, ಸಂಭವಿಸುವ ಸಾಧ್ಯತೆಯಿದೆ. ಈ ಮೇಲ್ಕಂಡ ಸಲಹೆ ಸೂಚನೆಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟ

ಣೆ ತಿಳಿಸಿದೆ.

 

By Raju

Leave a Reply

Your email address will not be published. Required fields are marked *