ರೈತರೇ ಗಮನಿಸಿ ರಾಜ್ಯದಲ್ಲಿ 5 ದಿನ ಭಾರೀ ಮಳೆ

ಆತ್ಮೀಯ ರೈತ ಬಾಂಧವರೇ, ಇನ್ನೇನು ಮುಂಗಾರು ಜೂನ್ ತಿಂಗಳಿಂದ ಪ್ರಾರಂಭವಾಗಲಿದ್ದು, ಆದರೆ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು ರೈತರು ಆತಂಕದಲ್ಲಿದ್ದಾರೆ.

ಜೂನ್ ಮೊದಲನೇ ವಾರದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಹೆಸರು ಬೆಳೆಯ ಬಿತ್ತನೆ ಯಾಗಬೇಕು, ಆದರೆ ಇಲ್ಲಿಯವರೆಗೂ ಕೂಡ ಹಸಿಯಾಗುವಷ್ಟು ಮಳೆ ಆಗದಿರುವ ಕಾರಣಗಳಿಂದಾಗಿ ರೈತರು ಆತಂಕದಲ್ಲಿದ್ದಾರೆ. ಹೀಗಾಗಿ ವರುಣನ ನಿರೀಕ್ಷೆಯಲ್ಲಿರುವಂತಹ ರೈತರಿಗೆ ಹವಮಾನ ಇಲಾಖೆಯೂ ಸಿಹಿ ಸುದ್ದಿಯನ್ನು ನೀಡಿದ್ದು ಮುಂದಿನ ಐದು ದಿನಗಳಲ್ಲಿ ಮಳೆ ಆಗಲಿದೆ ಎಂದು ವರದಿಯನ್ನು ನೀಡಿದೆ.

-ತಮಿಳುನಾಡು ಕರಾವಳಿಯಲ್ಲಿ ಮೇಲೆ ಸುಳಿಗಾಳಿ ಎದ್ದಿರುವ ಪರಿಣಾಮ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಒಳನಾಡಿನ ಕರಾವಳಿ ಭಾಗದಲ್ಲಿ ಸಾಧಾರಣಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹೀಗಾಗಿ ಕೆಲ ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೂ ಅಲರ್ಟ್ ಘೋಷಣೆ ಮಾಡಿದ್ದು, ಮುಂಜಾಗೃತ ಕ್ರಮತೆಗೆದುಕೊಳ್ಳುವಂತೆ ಸೂಚಿಸಿದೆ.

ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬೀದರ್, ಹಾವೇರಿ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ದಾವಣಗೆರೆ,ಕೋಲಾರ, ಮಂಡ್ಯ, ಮೈಸೂರು,ರಾಮನಗರ,ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ 5 ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಯೊಳಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಬಿರುಗಾಳಿ ಸಮೇತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Comment