ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ- ಮಹಾರಾಷ್ಟ್ರ, ಗುಜರಾತ್‌ಗೆ ರೆಡ್ ಅಲರ್ಟ್ ಘೋಷಿಸಿದ ಭಾರತೀಯ ಹವಾಮಾನ ಇಲಾಖೆ

ಮಹಾರಾಷ್ಟ್ರ ಹಾಗೂ ಗುಜರಾತ್‌ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಎರಡೂ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯದ ಘಾಟ್ ಪ್ರದೇಶಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ- ಮಹಾರಾಷ್ಟ್ರ, ಗುಜರಾತ್‌ಗೆ ರೆಡ್ ಅಲರ್ಟ್ ಮುಂದಿನ ೩ ದಿನಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆಯು ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಬುಲೆಟಿನ್ ಪ್ರಕಾರ, ಜುಲೈ ೨೨ ರಿಂದ ಜುಲೈ ೨೫ ರ ವರೆಗೆ ಹಿಮಾಚಲ ಮತ್ತು ಪೂರ್ವ ರಾಜಸ್ಥಾನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

 

Leave a Comment