KEA

ಇಂದಿನಿಂದ ರಾಜ್ಯಾಧ್ಯಂತ ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹಾಜರಾಗುತ್ತಿದ್ದು, ಪರೀಕ್ಷೆ ಬರೆಯಲು ಹೋಗುವ ಮುನ್ನ ಈ ಕೆಲವು ಪ್ರಮುಖ ಸೂಚನೆಗಳನ್ನು ಈಗಲೇ ತಿಳಿಯಿರಿ..

Important Instructions for KEA exam :

ಹಲವಾರು ಅಭ್ಯರ್ಥಿಗಳ ಪರೀಕ್ಷಾ ಕೇಂದ್ರವು, ವಾಸ ಸ್ಥಳದಿಂದ ದೂರವಿದ್ದು, ಇತ್ತೀಚೆಗೆ ಬಸ್, ರೈಲು ಇತ್ಯಾದಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕಿಂತ ಒಂದು ಗಂಟೆಯ ಮೊದಲು ಪರೀಕ್ಷಾ ಕೇಂದ್ರವನ್ನು ತಲುಪಲು ಅಭ್ಯರ್ಥಿಗಳು ಮುನ್ನೆಚ್ಚರಿಕೆಯಿಂದ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಸೂಕ್ತ.

ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಮೊದಲನೆಯ ಬೆಲ್ ಆದ ತಕ್ಷಣ ಅಂದರೆ ಬೆ.10.00 / ಮ. 2.00 ನಂತರ ಪರೀಕ್ಷಾ ಕೊಠಡಿಯನ್ನು ಪ್ರವೇಶಿಸಿ ತಮ್ಮ ನೊಂದಣಿ ಸಂಖ್ಯೆಯ ನಿಗದಿತ ಆಸನಗಳಲ್ಲಿ ಕುಳಿತುಕೊಳ್ಳಬೇಕು.

ಮೂರನೆಯ ಬೆಲ್ ಅಂದರೆ ಬೆ.10.30 / ಮ. 2.30 ಆದ ನಂತರ ಪರೀಕ್ಷಾ ಕೊಠಡಿಯನ್ನು ಪ್ರವೇಶಿಸಲು ಅಭ್ಯರ್ಥಿಗಳಿಗೆ ಅನುಮತಿ ನೀಡಲಾಗುವುದಿಲ್ಲ.

ಪ್ರವೇಶ ಪತ್ರದಲ್ಲಿ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರವನ್ನು ಹೊರತುಪಡಿಸಿ ಇತರೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯಲು ಅಭ್ಯರ್ಥಿಗಳಿಗೆ ಅನುವು ಮಾಡಿಕೊಡುವುದಿಲ್ಲ.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳಾದ, ಫೋನ್, ಬ್ಲೂಟೂಥ್, ಕ್ಯಾಲ್ ಕ್ಯುಲೇಟರ್, ಪೇಪರ್ ಚೀಟಿ, ಬುಕ್ಸ್ / ಪುಸ್ತಕ ಇತ್ಯಾದಿಗಳನ್ನು ತರುವುದನ್ನು ನಿಷೇಧಿಸಲಾಗಿದೆ.

ಅಭ್ಯರ್ಥಿಯು ಕಡ್ಡಾಯವಾಗಿ ಪ್ರವೇಶ ಪತ್ರ ಮತ್ತು ಮಾನ್ಯತೆ ಇರುವ ಯಾವುದಾದರು ಒಂದು, ಗುರುತಿನ ಚೀಟಿಯನ್ನು ಅಂದರೆ, ಡ್ರೈವಿಂಗ್ ಲೈಸನ್ಸ್ / ಪಾಸ್ ಪೋರ್ಟ್ / ಆಧಾರ್ ಕಾರ್ಡ್ / ಪಾನ್ ಕಾರ್ಡ್ / ಮತದಾರರ ಗುರುತಿನ ಚೀಟಿ ಹಾಜರುಪಡಿಸಿದರೆ ಮಾತ್ರ ಅಭ್ಯರ್ಥಿಯನ್ನು ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಬಿಡಲಾಗುವುದು.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು / ತೆಗೆದುಕೊಂಡು ಹೋಗುವಂತಿಲ್ಲ. ವಿವಿಧ ಸಮಯಗಳಲ್ಲಿ ಬಾರಿಸುವ ಎಚ್ಚರಿಕೆಯ ಗಂಟೆಗಳ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟಿನಲ್ಲಿ http://kea.kar.nic.in ಪ್ರಚುರ ಪಡಿಸಿರುವ ಬೆಲ್ ಸಮಯವನ್ನು ಹಾಗು ವೇಳಾಪಟ್ಟಿಯನ್ನು ನೋಡಲು ಕೋರಿದೆ.

ಅಭ್ಯರ್ಥಿಗಳು ತುಂಬು ತೋಳಿನ ಶರ್ಟ್ ಧರಿಸಿ ಹಾಜರಾಗಬಾರದು ಹಾಗು ಯಾವುದೇ ರೀತಿಯ ಆಭರಣಗಳನ್ನು ಧರಿಸಿ (ಮಂಗಳ ಸೂತ್ರ ಹೊರತು ಪಡಿಸಿ) ಪರೀಕ್ಷೆಗೆ ಹಾಜರಾಗುವಂತಿಲ್ಲ. ಈ ಬಗ್ಗೆ ಪ್ರಾಧಿಕಾರದ ವೆಬ್ ಸೈಟಿನಲ್ಲಿ ಪ್ರಕಟಿಸಿರುವ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು.

ಇತ್ತೀಚಿನ ದಿನಗಳಲ್ಲಿ ಬ್ಲೂಟೂಥ್ ಉಪಕರಣಗಳ ಬಳಕೆ ಜಾಸ್ತಿಯಾಗಿರುವುದ ರಿಂದ, ಕಿವಿ ಅಥವಾ ಬಾಯಿಯನ್ನು ಮುಚ್ಚಿಕೊಂಡು ಅಥವಾ ಯಾವುದೇ ರೀತಿಯ ಫೇಸ್ ಮಾಸ್ಕ್ ಅನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ.

ಅಭ್ಯರ್ಥಿಗಳು ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ ನ್ನು ಮಾತ್ರ ಉಪಯೋಗಿಸಬೇಕು.

ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳು, ಭಯಪಡದೆ ಪರೀಕ್ಷೆ ಬರೆಯಿರಿ ಮತ್ತು ನಾವು ದಿನನಿತ್ಯ ರೈತರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

 

By Raju

Leave a Reply

Your email address will not be published. Required fields are marked *