ಮತದಾನದಂದು ವಿಶೇಷ ರೈಲುಗಳ ಸಂಚಾರ:ಇಲ್ಲಿವೆ ನೋಡಿ ಸ್ಪೆಷಲ್ ಟ್ರೈನ್ ಗಳ ಪಟ್ಟಿ

ಹುಬ್ಬಳ್ಳಿ: ವಿಧಾನಸಭೆ ಚುನಾವಣೆಯ ಮತದಾನದಂದು ಪ್ರಯಾಣಿಕರ ದಟ್ಟಣಿ ನಿಯಂತ್ರಣಕ್ಕಾಗಿ ನೈಋತ್ಯ ರೈಲ್ವೆ ವಲಯವು ಶ್ರೀ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬೆಳಗಾವಿ, ಯಶವಂತಪುರ- ಮುರುಡೇಶ್ವರ ಮತ್ತು ಕೆಎಸ್‌ಆರ್ ಬೆಂಗಳೂರು-ಬೀದರ- ಶ್ರೀ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮಧ್ಯೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ ಪ್ರಾರಂಭಿಸಿದೆ.

ಬೆಂಗಳೂರಿನ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಮೇ 9ರಂದು ರಾತ್ರಿ 8.30ಕ್ಕೆ ಹೊರಡುವ ರೈಲು, ಮಾರನೇ ದಿನ ಬೆಳಗ್ಗೆ 8.20ಕ್ಕೆ ಬೆಳಗಾವಿ ತಲುಪಲಿದೆ. ಮರಳಿ 10ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಡುವ ಈ ರೈಲು, ಮಾರನೇ ದಿನ ಬೆಳಗಿನಜಾವ 5 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.

ಯಶವಂತಪುರದಿಂದ 9ರಂದು ರಾತ್ರಿ 11.55ಕ್ಕೆ ಹೊರಡುವ ರೈಲು, ಮಾರನೇ ದಿನ ಮಧ್ಯಾಹ್ನ 12.55ಕ್ಕೆ ಮುರುಡೇಶ್ವರ ತಲುಪಲಿದೆ. ಮರಳಿ ಮುರುಡೇಶ್ವರದಿಂದ 10ರಂದು ಮಧ್ಯಾಹ್ನ 1.30ಕ್ಕೆ ಹೊರಟು, ಮಾರನೇ ದಿನ ಬೆಳಗಿನಜಾವ 4 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ.

ಕೆಎಸ್‌ಆರ್‌ ಬೆಂಗಳೂರಿನಿಂದ 9ರಂದು ಸಂಜೆ 5 ಗಂಟೆಗೆ ಹೊರಡುವ ರೈಲು, ಮಾರನೇ ದಿನ ಬೆಳಗ್ಗೆ 7.20ಕ್ಕೆ ಬೀದರ ತಲುಪಲಿದೆ. ಮರಳಿ, 10ರಂದು ರಾತ್ರಿ 8 ಗಂಟೆಗೆ ಹೊರಡುವ ಈ ರೈಲು, ಮಾರನೇ ದಿನ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Comment