nhai

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿದೆ. ಅ ಪ್ರಸ್ತುತ ಸಂಸ್ಥೆಯು 6 ಮುಖ್ಯ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಪ್‌ಲೈನ್ ಮೂಲಕ ಜೂ. 2ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ವಿಶೇಷ ಸೂಚನೆ:

ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ 37,400-2,18,200 ರೂ.ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ:

ಎನ್‌ಎಚ್‌ಎಐ ನೇಮಕಾತಿ ಅಧಿಸೂಚನೆಯ ಅನ್ವಯ ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ, ಬಿಇ/ ಬಿ.ಟೆಕ್ ಪದವಿಯನ್ನು ಪಡೆದಿರಬೇಕು.

ವಯೋಮಿತಿ:

ಜೂನ್ 2ಕ್ಕೆ ಅನ್ವಯವಾಗುವಂತೆ 56 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?:

ಆಸಕ್ತರು ಎನ್‌ಎಚ್‌ಎಐ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅಗತ್ಯ ದಾಖಲೆಗಳನ್ನು GM (HR Admn)&IIC, National Highways Authority of India, Plot No.G5&6, Sector&10, Dwarka, New Delhi&110075 ಇವರಿಗೆ ಕಳುಹಿಸಬೇಕು. ಸರ್ಚ್ ಮತ್ತು ಸೆಲೆಕ್ಷನ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಅರ್ಜಿ ಅಂತಿಮಗೊಳಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೇ ದಿನ :02.06.2023

ಹೆಚ್ಚಿನ ಮಾಹಿತಿಗಾಗಿ: nhai.gov.in

By Raju

Leave a Reply

Your email address will not be published. Required fields are marked *