ಇನ್ನು ಎಷ್ಟು ದಿನ ಮಳೆಯಾಗಲಿದೆ? ಆಗಸ್ಟ್ 3 ರವರೆಗೂ ಸುರಿಯಲಿದೆ ಭಾರಿ ಮಳೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಆತ್ಮೀಯ ಬಾಂಧವರೇ, ಕಳೆದ ಒಂದು ವಾರದಿಂದ ಕರ್ನಾಟಕ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿಯೂ ಕೂಡ ಬುಡುವಿಲ್ಲದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಇನ್ನು ಎಷ್ಟು ದಿನ ಈ ಮಳೆ ಇರಲಿದೆ? ಎಂದು ಕೇಳುವವರಿಗೆ ಹವಮಾನ ಇಲಾಖೆ, ಒಂದು ಮಾಹಿತಿಯನ್ನು ನೀಡಿದ್ದು, ಆಗಸ್ಟ್ ಮೂರರವರೆಗೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಮಳೆ ಅಬ್ಬರಿಸುತ್ತಿದ್ದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನೂ ಒಂದು ವಾರಗಳ ಕಾಲ ಇದೇ ರೀತಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಗದಗ, ಯಾದಗಿರಿ, ಬೆಳಗಾವಿ, ಕೊಪ್ಪಳ, ಬೀದರ್‌ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.
ಗೋಕಾಕ ಜಲಪಾತ ಭೋರ್ಗ- ರೆದು ಹರಿಯುತ್ತಿದ್ದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುತ್ತಿದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

 

Leave a Comment