ROAD MAP VILLAGE

ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ, ಕೃಷಿ ಸಲಕರಣೆಗಳನ್ನು ಸಾಗಿಸಲು ಬಳಸುವ ದಾರಿ ಎಂದರೆ ಕಾಲುದಾರಿ. ಆದರೆ ಭೂಮಾಲೀಕರು ಮತ್ತು ಖಾಸಗಿ ಜಮೀನುಗಳಲ್ಲಿ ತಿರುಗಾಡಲು ರೈತರಿಗೆ ಕಾಲುದಾರಿ ಬಳಸಲು ತಡೆ ಹಿಡಿಯುತ್ತಾರೆ. ಈ ಕಾಲುದಾರಿ ಸಮಸ್ಯೆ ಬಳಕೆದಾರ ರೈತರಿಗೆ ತೊಂದರೆ ಉಂಟು ಮಾಡುತ್ತಿದ್ದು,ಸರ್ಕಾರದ ಗಮನಕ್ಕೆ ಬಂದಿದೆ.

ಈ ಸಮಸ್ಯೆ ಬಗೆಹರಿಸಲು ಸರ್ಕಾರವು ಹೊಸ ಖಡಕ್ ಆದೇಶ ನೀಡಿದೆ. ಈ ಆದೇಶದ ಬಗ್ಗೆ  ಮಾಹಿತಿ ಹೀಗಿದೆ..

 ಈ ಕಾಲುದಾರಿ ಸಮಸ್ಯೆಯು ಬಹಳ ದಿನಗಳಿಂದ ಇದ್ದು  ಅಕ್ಕಪಕ್ಕದ ಜಮೀನುಗಳ ರೈತರು ಕೃಷಿ ಚಟುವಟಿಕೆಗಳನ್ನು ಮಾಡಿಕೊಳ್ಳಲು ಆಗದೆ ನಷ್ಟ ಅನುಭವಿಸುತ್ತಿದ್ದಾರೆ ಎಂಬ ದೂರು ವಿವಿಧ ಮಾಧ್ಯಮಗಳ ಮೂಲಕ ಸರ್ಕಾರದ ಗಮನಕ್ಕೆ ಬಂದಿದೆ.

 ಗ್ರಾಮ ನಕಾಶೆಯಲ್ಲಿ ಕಾಲುದಾರಿಯ ಗುರುತು ಇದ್ದರೂ ಕೂಡ, ಅಕ್ಕ ಪಕ್ಕದ ಅನೇಕ ಭೂಮಾಲೀಕರು ಮತ್ತು ಖಾಸಗಿ ಕಂಪನಿಯವರು ರೈತರಿಗೆ ಅಡ್ಡಿಪಡಿಸುವುದು, ಕಾಲು ದಾರಿಯನ್ನು ಮುಚ್ಚುವುದು, ಮುಳ್ಳ  ಹಾಕುವುದು ಇಂತಹ ಅನೇಕ ತೊಂದರೆಗಳನ್ನು ರೈತರಿಗೆ ನೀಡುತ್ತಿದ್ದಾರೆ, ಈ ಕಾರಣದಿಂದ ರೈತರು ನಷ್ಟವನ್ನು ಕೂಡ ಅನುಭವಿಸುತ್ತಿದ್ದಾರೆ.

The Indian Easemnt Act  1882 ನ ಪ್ರಕಾರ ಪ್ರತಿ ಹೊಲದ ಮಾಲೀಕರು ಅಥವಾ ಹೊಲದ ಅನುಭವದಲ್ಲಿರುವವರು ಅವರ ಹೊಲಕ್ಕೆ ಹೋಗಲು “ಹಕ್ಕು ಮತ್ತು ವಹಿವಾಟಿನ ”  ಹಕ್ಕನ್ನು ಹೊಂದಿರುತ್ತಾರೆ . ಇದಕೆ, ಅಕ್ಕ ಪಕ್ಕದ ಹೊಲದ ಯಾವುದೇ ವ್ಯಕ್ತಿಯು ಹಸ್ತಕ್ಷೇಪ ಅಥವಾ ಈ ಹಕ್ಕನ್ನು ಕ್ಷಿಣಿಸುವುದಕ್ಕೆ 

 ಅವಕಾಶ ಇರುವುದಿಲ್ಲ  ಎಂಬುದಾಗಿ ತಿಳಿಸಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ವಹಿಸಲು ಅವಕಾಶವಿದೆ ಮತ್ತು   Code of Criminal Procedure, 1973 ರ 147 ರನ್ವಯ ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ ಕುರಿತು  ಸ್ಥಳೀಯ ಗ್ರಾಮದಲ್ಲಿ ಅಥವಾ ನಗರಗಳಲ್ಲಿ ಯಾವುದೇ ಜಗಳ ಅಥವಾ ಶಾಂತಿಗೆ ಭಂಗ ತಂದರೆ, ಸಂಬಂಧಪಟ್ಟ ತಹಶೀಲ್ದಾರ್ ಅಧಿಕಾರಿಗಳು ಮತ್ತು ಮ್ಯಾಜಿಸ್ಟ್ರೇಟ್ ಅಧಿಕಾರಿಗಳು ಸರಿಯಾದ ಕ್ರಮ ವಹಿಸುವಲ್ಲಿ ಅಧಿಕಾರ ಹೊಂದಿರುತ್ತಾರೆ. ಈ ನಿಟ್ಟಿನಲ್ಲಿ ಎಲ್ಲಾ ರೈತರು ಗ್ರಾಮ ನಕಾಶೆಯಲ್ಲಿ ಕಾಲುದಾರಿ ಕಂಡು ಬಂದರೆ ನಿಮ್ಮ ಅಕ್ಕ ಪಕ್ಕ ಹೊಲದ ರೈತರಿಗೆ ಕಾಲುದಾರಿಯನ್ನು ಉಪಯೋಗಿಸಲು ಅವಕಾಶ ನೀಡಿಕೊಡಬೇಕು.

ಅದರಂತೆ, ತಾಲೂಕಿನ ತಹಶೀಲ್ದಾ‌ರರು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳನ್ನು ರೈತರಿಗೆ ನಡೆದಾಡಲು ಅಥವಾ ತಿರುಗಾಡಲು ಯಾವುದೇ ವ್ಯಕ್ತಿ ಅಡ್ಡಪಡಿಸಿದರೆ ಅಥವಾ ತೊಂದರೆ ನೀಡಿದರೆ, ಈ ಸಮಸ್ಯೆಗೆ ಅಧಿಕಾರಿಗಳು ಸಂಬಂಧ ಪಟ್ಟ ಕ್ರಮ ಕೈಗೊಳ್ಳಲು ಅಧಿಕಾರವಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

 

By Raju

Leave a Reply

Your email address will not be published. Required fields are marked *