samrakshane

ಪ್ರಕಸ್ತ ಸಾಲಿನ ಮುಂಗಾರು ಹಂಗಾಮಿಗಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ಅಧಿಸೂಚಿತ ಬೆಳೆಗಳಿಗೆ ನೋಂದಣಿ ಮಾಡಿಸಲು ಸರಕಾರವು ಅಧಿಸೂಚನೆಯನ್ನು ಹೊರಡಿಸಿದೆ. ಅಧಿಸೂಚಿತ ಬೆಳೆಗೆ ಬೆಳೆಸಾಲ ಪಡೆದ ರೈತರಿಗೆ ಈ ಯೋಜನೆಯು ಕಡ್ಡಾಯವಾಗಿದ್ದು, ಒಂದು ವೇಳೆ ಬೆಳೆಸಾಲ ಪಡೆದ ರೈತರು ಈ ಯೋಜನೆಯಡಿ ಭಾಗವಹಿಸಲು ಇಚ್ಚೆಪಡದೆ ಇದ್ದಲ್ಲಿ, ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣೆ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆವಿಮೆ ಯೋಜನೆಯಿಂದ ಕೈಬಿಡಲಾಗುವುದು. ಬೆಳೆಸಾಲ ಪಡೆಯದ ರೈತರಿಗೆ ಬೆಳೆವಿಮೆ ಯೋಜನೆಯು ಐಚ್ಛಿಕವಾಗಿರುತ್ತದೆ.

ನೀವು ಬೆಳೆವಿಮೆ ಮಾಡಿಸಿದ್ದರೆ ಯಾವ ಬೆಳೆಗಳಿಗೆ ಎಷ್ಟು ಬೆಳೆ ವಿಮೆ ಬರುತ್ತದೆ ಎಂದು ಆನ್ಲೈನ್ ಮೂಲಕ ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ, ಬನ್ನಿ ಹೇಗೆ ಅಂತ ನೋಡೋಣ.

ಡೈರೆಕ್ಟ್ ಲಿಂಕ್ ಆಗಿ ಇಲ್ಲಿ ಕ್ಲಿಕ್ ಮಾಡಿ:https://samrakshane.karnataka.gov.in/

or

ಡೈರೆಕ್ಟ್ ಲಿಂಕ್ ಆಗಿ ಇಲ್ಲಿ ಕ್ಲಿಕ್ ಮಾಡಿ:https://samrakshane.karnataka.gov.in/Premium/CheckStatusMain_aadhaar.aspx

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಎಸ್.ಬಿ.ಅಯ್, ಜಿ.ಐ.ಸಿ. ವಿಮಾ ಕಂಪನಿ ಆಯ್ಕೆಯಾಗಿರುತ್ತದೆ. ಆಸಕ್ತ ರೈತರು ಕೊನೆಯ ದಿನಾಂಕದವರೆಗೆ ಕಾಯದೆ ಅಧಿಸೂಚಿತ ಬೆಳೆಗೆ ಹತ್ತಿರದ ಬ್ಯಾಂಕ್‌ ಅಥವಾ ನೊಂದಣಿ ಕೇಂದ್ರಗಳಲ್ಲಿ ವಿಮಾ ಕಂತು ತುಂಬಿ ಬೆಳೆಗೆ ವಿಮೆ ಮಾಡಿಸಲು ಕೋರಿರುತ್ತಾರೆ. ಮುಂಗಾರು ಹಂಗಾಮಿನಲ್ಲಿ ಆಹಾರ ಬೆಳೆಗಳಿಗೆ ಬೆಳೆ ವಿಸ್ತೀರ್ಣಕ್ಕೆ ತಕ್ಕಂತೆ ಬೆಳೆ ವಿಮಾ ಕಂತಿನ ಶೇಕಡಾ 2 ರಷ್ಟು ಹಾಗೂ ವಾಣಿಜ್ಯ ಬೆಳೆಗಳಿಗೆ ಬೆಳೆ ವಿಮಾ ಕಂತಿನ ಶೇಕಡಾ 5 ರಷ್ಟು ರೈತರು ಪಾವತಿಸಬೇಕಾಗಿರುತ್ತದೆ.

ಸ್ಥಳೀಯ ಗಂಡಾಂತರ ಕಾರಣಗಳಿಂದ (ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಗೋಟ ಮತ್ತು ಗುಡುಗು ಮಿಂಚುಗಳಿಂದಾಗಿ ಆಗುವ ಬೆಂಕಿ ಅವಗಡ) ಬೆಳೆ ನಷ್ಟ ಸಂಭವಿಸಿದರೆ, ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ನೇರವಾಗಿ ಸಂಬಂಧಪಟ್ಟ ಅನುಷ್ಠಾನಗೊಳಿಸುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ಅಥವಾ ಹಣಕಾಸು ಸಂಸ್ಥೆ ಅಥವಾ ಕೃಷಿ, ತೋಟಗಾರಿಕೆ ಇಲಾಖೆ ಮೂಲಕ ತಕ್ಷಣ ಸೂಚನೆ ನೀಡತಕ್ಕದ್ದು,

ಇಂತಹ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಗಳೊಳಗಾಗಿ ತಿಳಿಸತಕ್ಕದ್ದು, ಈ ಯೋಜನೆಯಡಿ 2023ರ ಮುಂಗಾರು ಹಂಗಾಮಿನಡಿಯಲ್ಲಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರಗಳೊಳಗೆ ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥ ಪಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಒಳಪಡಿಸಲಾಗಿದೆ.

ಪ್ರಸಕ್ತ ಸಾಲಿನಿಂದ ಬೆಳೆ ವಿಮೆ ಮಾಡಿಸುವ ರೈತರು ಎಫ್‌ಐಡಿ ಹೊಂದಿರುವುದು ಕಡ್ಡಾಯ. ಬೆಳೆ ವಿಮೆ ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ, ತಾಲೂಕ ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಬೆಳೆ ವಿಮೆ ಸಂಸ್ಥೆ ಕಛೇರಿಗಳಿಗೆ

https://samrakshane.karnataka.gov. in/ ಜಾಲತಾಣ ಭೇಟಿ ನೀಡುವಂತೆ ಜಂಟಿ ಕೃಷಿ ನಿರ್ದೇಕರು ತಿಳಿಸಿದ್ದಾರೆ.

ವಿವಿಧ ಬೆಳೆಗಳ ವಿಮೆಗೆ ಕಂತು ಪಾವತಿ ಸೊಯಾ ಅವರೆ, ಉದ್ದು, ಹೆಸರು (ಮ.ಆ), ಸೋಯಾ ಅವರೆ, ಜೋಳ (ನೀರಾವರಿ) ಬೆಳೆಗಳಿಗೆ ವಿಮಾ ಕಂತು ಪಾವತಿಗೆ ಜುಲೈ 15 ಕೊನೆಯ ದಿನವಾಗಿದೆ.

ಅರಿಶಿಣ, ಸೂರ್ಯಕ್ರಾಂತಿ (ಮ.ಆ), ಕೆಂಪು ಮೆಣಸಿನಕಾಯಿ (ನೀರಾವರಿ), ಮುಸುಕಿನ ಜೋಳ, ಜೋಳ, ಸಜ್ಜೆ, ತೊಗರಿ, ಶೇಂಗಾ (ನೀರಾವರಿ, ಮ.ಆ), ಹುರಳ್ಳಿ (ಮ.ಆ), ಎಳ್ಳು (ಮ.ಆ) ಬೆಳೆ ಕಂತು ಪಾವತಿಗೆ ಜುಲೈ 31 ಕೊನೆಯ ದಿನಾಂಕವಾಗಿದೆ.

ಹಾಗೂ ಸೂರ್ಯ ಕ್ರಾಂತಿ (ನೀರಾವರಿ), ಈರುಳ್ಳಿ (ನೀರಾವರಿ, ಮ.ಆ), ಕೆಂಪು ಮೆಣಸಿನಕಾಯಿ (ಮ.ಆ) ಬೆಳೆಗಳಿಗೆ ವಿಮೆ ಕಂತು ಪಾವತಿಗೆ ಆಗಸ್ಟ 16 ಕೊನೆಯ ದಿನವಾಗಿದೆ.

 

By Raju

2 thought on “ಬೆಳೆ ವಿಮೆ ಮಾಡಿಸುವ ರೈತರು ನೋಡಲೇಬೇಕಾದ ಸುದ್ದಿ:ವಿಮೆ ಕ್ಲೇಮ್ ಹೇಗೆ ಮಾಡಿಕೊಳ್ಳುವುದು ಹಾಗೂ ವಿಮೆ ತುಂಬಲು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ.”
  1. ಬೆಳೆ ಸಮೀಕ್ಷೆ ನೀವೆ ಮಾಡಿ ಎಂದು ಅಧಿಕಾರಿಗಳು ರೈತರಿಗೆ ತಿಳುವಳಿಕೆ ನೀಡುವರು ಆಫ್ ಡೌನ್ಲೋಡ್
    ಮಾಡಿಕೊಂಡು ಸರ್ವೆ ನಂಬರ್ ಹಾಕಿದರೆ ನಿಮ್ಮ
    ಎಫ್ಐಡಿ ಬೇರೆಯವರ ಜಮೀನಿನಲ್ಲಿ ಸೇರಿದೆ ಈ
    ಕಾರಣ ಮಾಹಿತಿ ಓಪನ್ ಆಗುವದಿಲ್ಲವೆಂಬ ಸಂದೇ ಶ ಬರ್ತಾ ಇದೆ.ಸಂಬಂದಿಸಿದ ಇಲಾಖೆ ಸಂಪರ್ಕಿಸಿ
    ವಿಚಾರಿಸಿ ಚೆಕ್ ಮಾಡಿಸಿದರೆ ಸರಿ ಇರುತ್ತದೆ.ಹೀಗಾ ದರೆ ಸಮೀಕ್ಷೆ ಮಾಡುವುದು ಹೇಗೆ ?

Leave a Reply

Your email address will not be published. Required fields are marked *