ಆತ್ಮೀಯ ಬಾಂಧವರೇ,, ನಿಮಗೇನಾದರೂ sslc ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿವೇಯೇ, ಹಾಗಾದರೆ ನೀವು ಉತ್ತರ ಪತ್ರಿಕೆಗಳ ಛಾಯಾಪತಿ ಪಡೆಯಬೇಕೆ ಅಥವಾ ಮರು ಎಣಿಕೆ /ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕೆ, ಹಾಗಾದರೆ ನಿಮಗೆ ಇಲ್ಲಿದೆ ಅದರ ಮಾಹಿತಿ.

Sslc, sslc exams, sslc.karnataka.gov. in, karresults.nic.in

ಬೆಂಗಳೂರು: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿರುವ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳ ಛಾಯಾಪತಿ (ಸ್ಕ್ಯಾನ್ ಕಾಪಿ) ಪಡೆಯಲು ಆನ್‌ಲೈನ್ ಮೂಲಕ ಮೇ14ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 15ರಿಂದ 21ರ ವರೆಗೆ ಮರು ಎಣಿಕೆ/ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಮೇ 15ರವರೆಗೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Kea

ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಛಾಯಾಪ್ರತಿಯನ್ನು ಪಡೆಯಬೇಕು. ನಂತರವಷ್ಟೇ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕು. ಮರು ಎಣಿಕೆ ಉಚಿತವಾಗಿರುತ್ತದೆ.

ಪ್ರತಿ ವಿಷಯದ ಸ್ಕ್ಯಾನ್ ಪ್ರತಿ ಪಡೆಯಲು 410 ರೂ. ಮತ್ತು ಮರು ಮೌಲ್ಯಮಾಪನಕ್ಕೆ 810 ರೂ.ಗಳನ್ನು ನಿಗದಿ ಮಾಡಲಾಗಿದೆ. ಸ್ಕ್ಯಾನ್ ಪ್ರತಿ ಕಳುಹಿಸಿರುವ ಬಗ್ಗೆ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಬಳಿಕ ಮಂಡಳಿ ವೆಬ್‌ಸೈಟ್‌ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಪೂರಕ ಪರೀಕ್ಷೆಗೆ ಒಂದು ವಿಷಯಕ್ಕೆ 370 ರೂ., 2 ವಿಷಯಕ್ಕೆ 461 ರೂ. ಮತ್ತು ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ 620 ರೂ.ಗಳನ್ನು ನಿಗದಿ ಮಾಡಲಾಗಿದೆ.

ಈ ಬಗ್ಗೆ ಸಂದೇಹಗಳಿದ್ದರೆ ಮಾಹಿತಿ ಪಡೆಯಲು ಸಹಾಯವಾಣಿ 080- 23310075/76 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

By Raju

Leave a Reply

Your email address will not be published. Required fields are marked *