ಸಂಚಾರ ದಟ್ಟಣೆಯಿಂದ ಸಮಸ್ಯೆಯದಲ್ಲಿ 112ಕ್ಕೆ ಕರೆ ಮಾಡಿ ಹಾಗೂ ಕೂಡಲೇ ಪರಿಹಾರ ಕಂದುಕೊಳ್ಳಿ

ಬೆಂಗಳೂರು:ಸಂಚಾರ ದಟ್ಟಣೆ ನಿಷೇಧಿತ ಪ್ರದೇಶದಲ್ಲಿ ವಾಹನ ನಿಲುಗಡೆ, ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಕಿರಿಕಿರಿ ಹೀಗೆ ಸಂಚಾರ ಸಮಸ್ಯೆಗಳ ಬಗ್ಗೆ ಇನ್ನು ಮುಂದೆ ನಮ್ಮ 112ಕ್ಕೆ (ಪೊಲೀಸ್ ನಿಯಂತ್ರಣ ಕೊಠಡಿ)ಸಾರ್ವಜನಿಕರು ಕರೆ ಮಾಡಿ ಪೊಲೀಸರ ನೆರವು ಪಡೆಯಬಹುದು.

ಇದುವರೆಗೆ ಕಳ್ಳತನ, ಕೊಲೆ, ಕಿರುಕುಳ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸೈಬರ್ ಅಪರಾಧ ಕೃತ್ಯಗಳಿಗೆ ಸಂಬಂ ಧಿಸಿದಂತೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡುವ ಅವ ಕಾಶ ಇತ್ತು. ಇನ್ನು ಮುಂದೆ ಸಂಚಾರ ಸಮಸ್ಯೆಗಳಿಗೂ ಸಹ ನಿಯಂತ್ರಣ ಕೊಠಡಿಗೆ ಕರೆ ಮಾಡಬಹುದಾಗಿದೆ. ಇತ್ತೀಚಿಗೆ ಮಲ್ಲೇಶ್ವರದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ನಾಗರಿಕರೊ ಬ್ಬರು ಸೂಚಿಸಿದಂತೆ ಈಗ ಸಂಚಾರ ವಿಭಾಗದ ಸಮಸ್ಯೆ ಗಳನ್ನು ಕೂಡ ನಮ್ಮ ll2 ಸೌಲಭ್ಯ ಮೂಲಕ ದಾಖಲಿಸಲು ಮತ್ತು ಪರಿಹಾರ ಕಂಡುಕೊಳ್ಳಲು ಅನುವು ಮಾಡಲಾಗಿದೆ.

ಈ ರೀತಿಯ ಸಂಚಾರ ಸಮಸ್ಯೆ ಗಳನ್ನು ಹೊಯ್ಸಳ ಬದಲಾಗಿ ದ್ವಿಚಕ್ರ ವಾಹನ ಮೇಲಿನ ಸಂಚಾರ ವಿಭಾಗದ ಸಿಬ್ಬಂದಿ (ಕೋಬ್ರಾ) ನಿರ್ವಹಿಸಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಟ್ವಿಟ್ ಮಾಡಿದ್ದಾರೆ. ಸಭೆಯಲ್ಲಿ ನಾಗರಿಕರೊಬ್ಬರು ಸೂಚಿಸಿದಂತೆ ಈಗ ಸಂಚಾರ ವಿಭಾಗದ ಸಮಸ್ಯೆಗಳನ್ನು ಕೂಡ ನಮ್ಮ 112 ಮೂಲಕ ದಾಖಲಿಸಲು ಮತ್ತು ಪರಿಹಾರ ಕಂಡುಕೊಳ್ಳಲು ಅನುವು ಮಾಡಲಾಗಿದೆ.

 

Leave a Comment